Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:67 - ಕನ್ನಡ ಸಮಕಾಲಿಕ ಅನುವಾದ

67 ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಸ್ವೀಕರಿಸಿದನು. ಆಕೆಯು ಅವನ ಹೆಂಡತಿಯಾದಳು, ಅವನು ಆಕೆಯನ್ನು ಪ್ರೀತಿಸಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ದುಃಖ ಶಮನ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

67 ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

67 ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

67 ಇಸಾಕನು ಆಕೆಯನ್ನು ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಈ ರೀತಿಯಾಗಿ ಅವನು ರೆಬೆಕ್ಕಳನ್ನು ವರಿಸಿದನು. ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸತ್ತ ದುಃಖವನ್ನು ಶಮನ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

67 ನಂತರ ಇಸಾಕನು ಆಕೆಯನ್ನು ಕರೆದುಕೊಂಡು ತನ್ನ ತಾಯಿಯ ಗುಡಾರಕ್ಕೆ ಬಂದನು. ಅಂದು ರೆಬೆಕ್ಕಳು ಇಸಾಕನ ಹೆಂಡತಿಯಾದಳು. ಇಸಾಕನು ಅವಳನ್ನು ಬಹಳವಾಗಿ ಪ್ರೀತಿಸಿದನು. ತಾಯಿಯ ಸಾವಿನಿಂದ ಉಂಟಾಗಿದ್ದ ದುಃಖವು ಕಡಿಮೆಯಾಗಿ ಇಸಾಕನಿಗೆ ಆದರಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:67
16 ತಿಳಿವುಗಳ ಹೋಲಿಕೆ  

ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂದನು ಆದರಣೆ ಹೊಂದಿದ ಮೇಲೆ, ತಾನೂ, ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರಾನನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾ ಊರಿಗೆ ಹೋದರು.


ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.


ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ.


ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.


ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು. ಅಲ್ಲಿ ನೀನು ನನಗೆ ಉಪದೇಶ ಮಾಡಬಹುದಾಗಿತ್ತು. ನಾನು ದ್ರಾಕ್ಷಿ ಮಿಶ್ರಪಾನಕವನ್ನು ಕೊಡುತ್ತಿದ್ದೆನು. ದಾಳಿಂಬೆ ರಸವನ್ನು ನಿನಗೆ ಕುಡಿಸುತ್ತಿದ್ದೆನು.


ಹೀಗಿರುವುದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಾನು ನಿನ್ನ ಕಿರಿ ಮಗಳಾಗಿರುವ ರಾಹೇಲಳಿಗೋಸ್ಕರ ನಿಮ್ಮಲ್ಲಿ ಏಳು ವರ್ಷ ಸೇವೆ ಮಾಡುತ್ತೇನೆ,” ಎಂದನು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.


ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ, “ಬೇಗನೇ ಮೂರು ಸೇರು ನಯವಾದ ಹಿಟ್ಟು ನಾದಿ, ಒಲೆಯ ಮೇಲೆ ರೊಟ್ಟಿಗಳನ್ನು ಮಾಡು,” ಎಂದನು.


ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.


ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬಳನ್ನು ಮದುವೆಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು