Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದಿದ್ದರೆ, ನನಗೆ ಮಾಡಿದ ಆ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವೆ. ಆದರೆ ನನ್ನ ಮಗನನ್ನು ಅಲ್ಲಿಗೆ ಮಾತ್ರ ತಿರುಗಿ ಕರೆದುಕೊಂಡು ಹೋಗಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಆದರೆ ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಲ್ಲಿಗೆ ನಿನ್ನ ಸಂಗಡ ಬರಲು ಆ ಕನ್ಯೆಗೆ ಇಷ್ಟವಿಲ್ಲದೆಹೋದರೆ, ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವೆ. ಹೇಗೂ ನನ್ನ ಮಗನನ್ನು ಮರಳಿ ಅಲ್ಲಿಗೆ ಕರೆದುಕೊಂಡು ಹೋಗಕೂಡದು,” ಎಂದು ಮತ್ತೊಮ್ಮೆ ಒತ್ತಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಇಷ್ಟವಿಲ್ಲದೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಹೇಗೂ ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಕೂಡದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಆ ಕನ್ಯೆಯು ನಿನ್ನೊಡನೆ ಬರಲು ಇಷ್ಟಪಡದಿದ್ದರೆ, ಈ ಪ್ರಮಾಣದಿಂದ ನೀನು ಬಿಡುಗಡೆಯಾಗುವೆ. ಆದರೆ ನೀನು ನನ್ನ ಮಗನನ್ನು ನನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಕೂಡದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:8
8 ತಿಳಿವುಗಳ ಹೋಲಿಕೆ  

ಆದರೆ ಅವಳ ಗಂಡನು ಅದನ್ನು ಕೇಳಿದಾಗ ಬೇಡವೆಂದು ತಡೆದು, ಅವಳ ಮೇಲೆ ಇರುವ ಅವಳ ಹರಕೆಯನ್ನೂ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆಯನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಯೆಹೋವ ದೇವರು ಅವಳಿಗೆ ಕ್ಷಮಿಸುವರು.


ಆದರೆ ಅವಳ ತಂದೆ ಅದನ್ನು ಕೇಳಿ ಅವಳನ್ನು ತಡೆದರೆ, ಅವಳ ಎಲ್ಲಾ ಹರಕೆಗಳೂ ಪ್ರತಿಜ್ಞೆಗಳೂ ವ್ಯರ್ಥವಾಗುತ್ತವೆ. ಅವಳ ತಂದೆ ಅವಳನ್ನು ತಡೆದ ಕಾರಣ ಯೆಹೋವ ದೇವರು ಅವಳನ್ನು ಕ್ಷಮಿಸುವರು.


ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,


ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.


ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಉಳಿಸಬೇಕು. ಆದರೆ ನಾವು ಅವರಿಗೆ ಹೀಗೆ ಮಾಡೋಣ.


ನೀನು ನನ್ನ ಬಂಧುಗಳ ಬಳಿಗೆ ಬಂದಾಗ, ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ, ನಾನು ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆ,’ ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು