Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:24 - ಕನ್ನಡ ಸಮಕಾಲಿಕ ಅನುವಾದ

24 ಆಕೆಯು ಹೆರುವುದಕ್ಕೆ ದಿನತುಂಬಿದಾಗ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದಿನ ತುಂಬಿದಾಗ ರೆಬೆಕ್ಕಳು ಅವಳಿ ಮಕ್ಕಳನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಕೆ ದಿನತುಂಬಿದಾಗ ಅವಳಿಮಕ್ಕಳನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದಿನ ತುಂಬಿದ ಮೇಲೆ ರೆಬೆಕ್ಕಳು ಅವಳಿಜವಳಿ ಮಕ್ಕಳನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:24
7 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಆಕೆಗೆ ಹೀಗೆ ಹೇಳಿದರು: “ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ಜನಾಂಗಗಳು ಹೊರಟುಬಂದು ಬೇರೆಯಾಗುವುವು. ಒಂದು ಇನ್ನೊಂದಕ್ಕಿಂತ ಬಲವಾಗಿರುವುದು. ಇದಲ್ಲದೆ ಹಿರಿಯನು ಕಿರಿಯವನಿಗೆ ಸೇವೆಮಾಡುವನು.”


ಮೊದಲನೆಯವನು ಕೆಂಪಾಗಿಯೂ ಕೂದಲಿನ ವಸ್ತ್ರದಂತೆ ಇಡೀ ದೇಹವು ಇದ್ದುದರಿಂದ ಅವನಿಗೆ, ಏಸಾವ, ಎಂದು ಹೆಸರಿಟ್ಟರು.


ಅವಳು ಹೆರುವ ಸಮಯದಲ್ಲಿ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದವು.


ಎದೋಮ್ಯನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನು ನಿಮ್ಮ ಸಹೋದರನು; ಈಜಿಪ್ಟಿನವನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನ ದೇಶದಲ್ಲಿ ನೀವು ಪರವಾಸಿಯಾಗಿದ್ದಿರಿ.


ಎದೋಮ್ ಎಂಬ ಏಸಾವನ ವಂಶಾವಳಿ ಇದು:


ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯೀರ್ ಪರ್ವತದ ನಾಡನ್ನು ಸೊತ್ತಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಈಜಿಪ್ಟಿಗೆ ಹೋದರು.


ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಇಸಾಕನಿಗೆ ಇಬ್ಬರು ಮಕ್ಕಳು ಏಸಾವ ಮತ್ತು ಯಾಕೋಬ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು