Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:26 - ಕನ್ನಡ ಸಮಕಾಲಿಕ ಅನುವಾದ

26 ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹೊರಗೆ ಬಂದನು. ಅವನಿಗೆ, ಯಾಕೋಬ, ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರವತ್ತು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಎರಡನೆಯ ಮಗು ಏಸಾವನ ಹಿಮ್ಮಡಿಯನ್ನು ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಾಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನು ಅರುವತ್ತು ವರುಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:26
13 ತಿಳಿವುಗಳ ಹೋಲಿಕೆ  

ಅದಕ್ಕೆ ಏಸಾವನು, “ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ? ಅವನು ನನ್ನನ್ನು ಎರಡು ಸಾರಿ ವಂಚಿಸಿದ್ದಾನೆ. ಅವನು ನನ್ನ ಚೊಚ್ಚಲತನವನ್ನು ತೆಗೆದುಕೊಂಡಿದ್ದಾನೆ. ಇಗೋ, ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸಲಿಲ್ಲವೋ?” ಎಂದನು.


ಗರ್ಭದಲ್ಲಿ ಅವನು ತನ್ನ ಸಹೋದರನನ್ನು ಹಿಮ್ಮಡಿಯಿಂದ ಹಿಡಿದು, ಮನುಷ್ಯನಾಗಿಯೇ ದೇವರೊಂದಿಗೆ ಹೋರಾಡಿದನು.


ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.


ಆಗ ಇಸಾಕನು ನೂರ ಎಂಬತ್ತು ವರ್ಷದವನಾಗಿದ್ದನು.


ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯೀರ್ ಪರ್ವತದ ನಾಡನ್ನು ಸೊತ್ತಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಈಜಿಪ್ಟಿಗೆ ಹೋದರು.


ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಇಸಾಕನಿಗೆ ಇಬ್ಬರು ಮಕ್ಕಳು ಏಸಾವ ಮತ್ತು ಯಾಕೋಬ.


ಅಬ್ರಹಾಮನ ಮಗ ಇಸಾಕನು ಜನಿಸಿದಾಗ ಅವನು ನೂರು ವರ್ಷದವನಾಗಿದ್ದನು.


ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಹೋದರರಾದ ಇಸ್ರಾಯೇಲರು ಹೇಳುವುದೇನೆಂದರೆ, ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.


ಅವರಿಗೆ ಹುಟ್ಟುವ ಮಕ್ಕಳಲ್ಲಿ ಮೂರನೆಯ ತಲಾಂತರದವರು ಯೆಹೋವ ದೇವರ ಸಭೆಯಲ್ಲಿ ಸೇರಬಹುದು.


ಯಾಕೋಬನು ದೇವದೂತನ ಸಂಗಡ ಹೋರಾಡಿ ಜಯಿಸಿದನು. ಅವನು ಅತ್ತು ಆತನ ಅನುಗ್ರಹಕ್ಕಾಗಿ ವಿಜ್ಞಾಪನೆಯನ್ನು ಸಲ್ಲಿಸಿದನು. ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು. ಅಲ್ಲಿ ಅವನು ಆತನೊಂದಿಗೆ ಮಾತನಾಡಿದನು.


“ನಾನು ನಿಮ್ಮನ್ನು ಪ್ರೀತಿ ಮಾಡಿದೆನು” ಎಂದು ಯೆಹೋವ ದೇವರು ಹೇಳುತ್ತಾರೆ. “ನೀವಾದರೋ, ‘ಯಾವುದರಲ್ಲಿ ನೀವು ನಮ್ಮನ್ನು ಪ್ರೀತಿ ಮಾಡಿದ್ದೀರಿ?’ ಎಂದು ಕೇಳುತ್ತೀರಿ. “ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದರೂ ನಾನು ಯಾಕೋಬನನ್ನು ಪ್ರೀತಿ ಮಾಡಿದೆನು. ಎಂದು ಯೆಹೋವ ದೇವರು ಅನ್ನುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು