Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:27 - ಕನ್ನಡ ಸಮಕಾಲಿಕ ಅನುವಾದ

27 ಆ ಹುಡುಗರು ಬೆಳೆದಾಗ ಏಸಾವನು ಬೇಟೆಯಾಡುವುದರಲ್ಲಿ ಜಾಣನಾಗಿದ್ದು, ಅಡವಿಯ ಮನುಷ್ಯನಾದನು. ಯಾಕೋಬನು ಗುಡಾರಗಳಲ್ಲಿ ವಾಸಮಾಡುವ ಸಾಧು ಮನುಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಹುಡುಗರಿಬ್ಬರು ಬೆಳೆದರು. ಏಸಾವನು ಚೂಟಿಯಾದ ಬೇಟೆಗಾರನಾದ, ವನವಾಸಿಯಾದ, ಯಕೋಬನು ಸಾಧುಮನುಷ್ಯ, ಅವನದು ಗುಡಾರಗಳಲ್ಲಿ ವಾಸ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನೆಂಬವನು ಬೇಟೆಯಾಡುವದರಲ್ಲಿ ಜಾಣನಾದನು; ಅವನು ಅರಣ್ಯವಾಸಿ. ಯಾಕೋಬನು ಸಾಧುಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:27
14 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು.


ದೇವರು ಆ ಹುಡುಗನ ಸಂಗಡ ಇದ್ದರು. ಹುಡುಗನು ಬೆಳೆದು ಮರುಭೂಮಿಯಲ್ಲಿ ವಾಸಮಾಡಿ ಬಿಲ್ಲುಗಾರನಾದನು.


ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ.


ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.


ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು.


ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು.


ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.


ಮನೆ ಕಟ್ಟಬೇಡಿರಿ, ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷಿತೋಟವನ್ನು ನೆಡಬೇಡಿರಿ, ಅಂಥದ್ದು ನಿಮಗಿರಬಾರದು. ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿವಸಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು