Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:30 - ಕನ್ನಡ ಸಮಕಾಲಿಕ ಅನುವಾದ

30 ಏಸಾವನು ಯಾಕೋಬನಿಗೆ, “ಆ ಕೆಂಪಾದ ಪದಾರ್ಥವನ್ನು ತಿನ್ನುವುದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ,” ಎಂದನು. ಆದ್ದರಿಂದ ಅವನಿಗೆ, ಎದೋಮ್, ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ‘ನಾನು ಬಹಳವಾಗಿ ದಣಿದು ಬಂದಿದ್ದೇನೆ. ಆ ಕೆಂಪು ಪದಾರ್ಥವನ್ನು ತಿನ್ನಲು ಕೊಡು’, ಎಂದು ಕೇಳಿದ. (ಈ ಕಾರಣದಿಂದಲೇ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನಿಗೆ - ನಾನು ಬಹು ದಣಿದು ಬಂದಿದ್ದೇನೆ; ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವದಕ್ಕೆ ಕೊಡಪ್ಪಾ ಎಂದು ಹೇಳಿದನು. (ಈ ಸಂಗತಿಯಿಂದ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆಗ ಏಸಾವನು ಯಾಕೋಬನಿಗೆ, “ಹಸಿವೆಯಿಂದ ನನಗೆ ಆಯಾಸವಾಗಿದೆ. ನನಗೆ ಕೆಂಪಾದ ಸ್ವಲ್ಪ ಅಲಸಂದಿ ಗುಗ್ಗರಿಯನ್ನು ಕೊಡು” ಎಂದು ಕೇಳಿದನು. (ಈ ಕಾರಣದಿಂದ ಜನರು ಅವನಿಗೆ “ಏದೋಮ್” ಎಂದು ಕರೆಯುತ್ತಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:30
15 ತಿಳಿವುಗಳ ಹೋಲಿಕೆ  

ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.


ಎದೋಮ್ಯನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನು ನಿಮ್ಮ ಸಹೋದರನು; ಈಜಿಪ್ಟಿನವನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನ ದೇಶದಲ್ಲಿ ನೀವು ಪರವಾಸಿಯಾಗಿದ್ದಿರಿ.


ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಕಂಪನವು ಮೋವಾಬಿನ ಬಲಿಷ್ಠರನ್ನು ಹಿಡಿಯುವುದು; ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.


ಮಗ್ದೀಯೇಲ್ ಮತ್ತು ಗೀರಾಮ್ ಇವರೇ ತಮ್ಮ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಎದೋಮ್ಯರ ತಂದೆ ಏಸಾವನು ವಂಶಾವಳಿ ಇದೇ.


ಸೇಯೀರ್ ಪರ್ವತದಲ್ಲಿರುವ ಎದೋಮ್ಯರ ತಂದೆ ಏಸಾವನ ವಂಶಾವಳಿಗಳು ಇವೇ:


ಎದೋಮ್ ಎಂಬ ಏಸಾವನ ವಂಶಾವಳಿ ಇದು:


ಒಂದು ಸಾರಿ ಯಾಕೋಬನು ಅಡಿಗೆ ಮಾಡುತ್ತಿದ್ದಾಗ, ಏಸಾವನು ದಣಿದು ಅಡವಿಯಿಂದ ಬಂದನು.


ಆಗ ಯಾಕೋಬನು, “ಈ ಹೊತ್ತು ನಿನ್ನ ಜೇಷ್ಠ ಪುತ್ರನ ಹಕ್ಕನ್ನು ನನಗೆ ಮಾರು,” ಎಂದನು.


ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.


ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?


ಕಳುಹಿಸುವಾಗ ಅವರಿಗೆ, “ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳಬೇಕು: ‘ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ: ಲಾಬಾನನ ಸಂಗಡ ನಾನು ಇಲ್ಲಿಯವರೆಗೆ ಪ್ರವಾಸಿಯಾಗಿದ್ದೆನು.


ಹೀಗೆ ಎದೋಮನು ಎಂಬ ಏಸಾವನು ಸೇಯೀರ್ ಪರ್ವತದಲ್ಲಿ ವಾಸವಾಗಿದ್ದನು.


ಇವರು ಎದೋಮ್ ಎಂಬ ಏಸಾವನ ಪುತ್ರರು. ಇವರು ಮುಖಂಡರಾಗಿದ್ದರು.


ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು