ಆದಿಕಾಂಡ 25:6 - ಕನ್ನಡ ಸಮಕಾಲಿಕ ಅನುವಾದ6 ಅಬ್ರಹಾಮನಿಗೆ ಇದ್ದ ಉಪಪತ್ನಿಯರ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು, ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ದೂರಕ್ಕೆ ಪೂರ್ವದಿಕ್ಕಿನಲ್ಲಿದ್ದ ಕೆದೆಮ್ ನಾಡಿಗೆ, ಕಳಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿದನು. ಅಧ್ಯಾಯವನ್ನು ನೋಡಿ |