Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:18 - ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಇಸಾಕನು ತನ್ನ ತಂದೆ ಅಬ್ರಹಾಮನ ದಿನಗಳಲ್ಲಿ ಅಗೆದಂಥ ಬಾವಿಗಳನ್ನು ತಿರುಗಿ ಅಗೆದನು. ಏಕೆಂದರೆ ಅಬ್ರಹಾಮನು ಮರಣದ ನಂತರ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ಮರಳಿ ತೆಗೆಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ತಿರಿಗಿ ತೆಗಿಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇದಕ್ಕೂ ಬಹುಕಾಲದ ಹಿಂದೆ, ಅಬ್ರಹಾಮನು ಅನೇಕ ಬಾವಿಗಳನ್ನು ತೋಡಿಸಿದ್ದನು. ಅಬ್ರಹಾಮನು ಸತ್ತುಹೋದ ಮೇಲೆ, ಫಿಲಿಷ್ಟಿಯರು ಆ ಬಾವಿಗಳಿಗೆ ಮಣ್ಣುಹಾಕಿ ಮುಚ್ಚಿದ್ದರು. ಇಸಾಕನು ಆ ಬಾವಿಗಳನ್ನು ಮತ್ತೆ ತೋಡಿಸಿ, ತನ್ನ ತಂದೆ ಕೊಟ್ಟಿದ್ದ ಹೆಸರುಗಳನ್ನೇ ಅವುಗಳಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:18
10 ತಿಳಿವುಗಳ ಹೋಲಿಕೆ  

“ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.


ನಾನು ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯಿಂದ ತೆಗೆದುಹಾಕುವೆನು. ಇನ್ನು ಮುಂದೆ ಅವರ ಹೆಸರನ್ನು ಕರೆಯಲಾಗುವುದಿಲ್ಲ.


ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ.


ನೆಬೋ, ಬಾಳ್ ಮೆಯೋನ್ ಎಂದು ಬೇರೆ ಈ ಹೆಸರು ಹೊಂದಿದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ, ತಾವು ಕಟ್ಟಿದ ಪಟ್ಟಣಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣ ಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅಬ್ರಹಾಮನು ಹೆಸರಿಟ್ಟನು.


ಅಬೀಮೆಲೆಕನ ಸೇವಕರು ಬಲಾತ್ಕಾರದಿಂದ ತೆಗೆದುಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಿದನು.


ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ, ಅಲ್ಲಿ ವಾಸಮಾಡಿದನು.


ಇಸಾಕನ ಸೇವಕರು ತಗ್ಗಿನಲ್ಲಿ ಅಗೆದಾಗ, ಅಲ್ಲಿ ಅವರಿಗೆ ಉಕ್ಕುವ ಒರತೆಯ ಬಾವಿಯು ಸಿಕ್ಕಿತು.


ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.


ಅದಕ್ಕೆ ಅಬ್ರಹಾಮನು, “ನಾನೇ ಆ ಬಾವಿಯನ್ನು ಅಗೆದಿದ್ದೇನೆಂಬುದಕ್ಕೆ ಸಾಕ್ಷಿಯಾಗಿ ಆ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು