ಆದಿಕಾಂಡ 26:20 - ಕನ್ನಡ ಸಮಕಾಲಿಕ ಅನುವಾದ20 ಗೆರಾರಿನ ಮಂದೆಯನ್ನು ಮೇಯಿಸುವವರು, “ಈ ನೀರು ನಮ್ಮದು,” ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ, ಏಸೆಕ್, ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ಏಸೆಕ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಗೆರಾರಿನ ದನಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನಕಾಯುವವರ ಸಂಗಡ ಜಗಳವಾಡಿದರು. ಆದುದರಿಂದ ಇಸಾಕನು ಆ ಬಾವಿಗೆ “ಏಸೆಕ್" ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಗೆರಾರಿನ ದನಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಗೆರಾರಿನ ಕಣಿವೆಯಲ್ಲಿ ಕುರಿಕಾಯುತ್ತಿದ್ದ ಜನರು ಇಸಾಕನ ಸೇವಕರೊಡನೆ ವಾದಮಾಡಿ, “ಈ ನೀರು ನಮ್ಮದು” ಎಂದು ಹೇಳಿದರು. ಆದ್ದರಿಂದ ಇಸಾಕನು ಆ ಬಾವಿಗೆ “ಏಸೆಕ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |