ಆದಿಕಾಂಡ 26:22 - ಕನ್ನಡ ಸಮಕಾಲಿಕ ಅನುವಾದ22 ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗೆದಾಗ, ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು, “ಈಗ ಯೆಹೋವ ದೇವರು ನಮಗೆ ಸ್ಥಳವನ್ನು ಮಾಡಿದ್ದಾರೆ. ನಾವು ಈ ದೇಶದಲ್ಲಿ ಅಭಿವೃದ್ಧಿ ಹೊಂದುವೆವು,” ಎಂದು ಹೇಳಿ ಅದಕ್ಕೆ, ರೆಹೋಬೋತ್, ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ರೆಹೋಬೋತ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನು ಅಲ್ಲಿಂದ ಮುಂದಕ್ಕೆ ತೆರಳಿ ಮತ್ತೊಂದು ಬಾವಿಯನ್ನು ಅಗೆಸಿದನು. ಅದರ ಬಗ್ಗೆ ಯಾರೂ ಜಗಳಕ್ಕೆ ಬರಲಿಲ್ಲ. ಈ ಕಾರಣ ಅವನು, “ಸರ್ವೇಶ್ವರ ನಮಗೀಗ ಸ್ಥಳಾವಕಾಶ ಮಾಡಿಕೊಟ್ಟಿದ್ದಾರೆ; ನಾವು ಅಭಿವೃದ್ಧಿಯಾಗುತ್ತೇವೆ,” ಎಂದು ಹೇಳಿ ಆ ಬಾವಿಗೆ ‘ರೆಹೋಬೋತ್’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ಅಗೆಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದದರಿಂದ ಅವನು - ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದಾನಾದದರಿಂದ ಅಭಿವೃದ್ಧಿಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಇಸಾಕನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ತೋಡಿಸಿದನು. ಆ ಬಾವಿಯ ಕುರಿತು ವಾದಮಾಡಲು ಯಾರೂ ಬರಲಿಲ್ಲ. ಆದ್ದರಿಂದ ಇಸಾಕನು, “ಈಗ ಯೆಹೋವನು ನಮಗೋಸ್ಕರ ಒಂದು ಸ್ಥಳವನ್ನು ತೋರಿಸಿದ್ದಾನೆ. ನಾವು ಈ ಸ್ಥಳದಲ್ಲಿ ಅಭಿವೃದ್ಧಿಯಾಗೋಣ” ಎಂದು ಹೇಳಿ ಆ ಬಾವಿಗೆ “ರೆಹೋಬೋತ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |