Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:34 - ಕನ್ನಡ ಸಮಕಾಲಿಕ ಅನುವಾದ

34 ಏಸಾವನು ನಲವತ್ತು ವರ್ಷದವನಾಗಿದ್ದಾಗ, ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತಳನ್ನೂ, ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯನ ಮಗಳು ಯೆಹುದೀತಳನ್ನು ಮತ್ತು ಹಿತ್ತಿಯನಾದ ಎಲೋನನ ಮಗಳು ಬಾಸೆಮತಳನ್ನು ಮದುವೆಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಏಸಾವನು ನಾಲ್ವತ್ತು ವರುಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಏಸಾವನಿಗೆ ನಲವತ್ತು ವರ್ಷಗಳಾಗಿದ್ದಾಗ ಅವನು ಹಿತ್ತಿಯರ ಇಬ್ಬರು ಸ್ತ್ರೀಯರನ್ನು ಮದುವೆ ಮಾಡಿಕೊಂಡನು. ಒಬ್ಬಳು ಬೇರಿಯನ ಮಗಳಾದ ಯೆಹೂದೀತಳು, ಮತ್ತೊಬ್ಬಳು ಏಲೋನನ ಮಗಳಾದ ಬಾಸೆಮತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:34
11 ತಿಳಿವುಗಳ ಹೋಲಿಕೆ  

ಏಸಾವನು ಕಾನಾನ್ಯರ ಪುತ್ರಿಯರನ್ನು ಅಂದರೆ, ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,


ಇದಲ್ಲದೆ ಅವರ ಪುತ್ರಿಯರನ್ನು ನಿನ್ನ ಪುತ್ರರಿಗೋಸ್ಕರ ತೆಗೆದುಕೊಳ್ಳಬೇಕಾಗಬಹುದು. ತೆಗೆದುಕೊಂಡರೆ ಅವರ ಪುತ್ರಿಯರು ತಮ್ಮ ದೇವರುಗಳನ್ನು ಆರಾಧಿಸಿ, ನಿಮ್ಮ ಪುತ್ರರನ್ನೂ ಅನ್ಯದೇವರುಗಳ ಆರಾಧನೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು.


ರೆಯೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ, ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.


ಒಹೊಲೀಬಾಮಳು ಯೆಯೂಷನನ್ನು, ಯಳಾಮನನ್ನು, ಕೋರಹ ಇವರನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಪುತ್ರರು.


ಅವನು ಇಷ್ಮಾಯೇಲನ ಬಳಿಗೆ ಹೋಗಿ, ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗ ಇಷ್ಮಾಯೇಲನ ಮಗಳೂ, ನೆಬಾಯೋತನ ತಂಗಿಯೂ ಆಗಿರುವ ಮಹಲತ್ ಎಂಬವಳನ್ನೂ ಮದುವೆಮಾಡಿಕೊಂಡನು.


ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬಾರದು.


ಯಾವ ಕಾಮುಕರಾಗಲಿ, ಏಸಾವನಂಥ ಪ್ರಾಪಂಚಿಕರಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆಯಿಂದ ನೋಡಿಕೊಳ್ಳಿರಿ. ಅವನು ಒಂದು ತುತ್ತು ಅನ್ನಕ್ಕಾಗಿ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.


ಆದರೆ ಲೈಂಗಿಕ ಅನೈತಿಕತೆ ಹೆಚ್ಚಾಗಿರುವುದರಿಂದ, ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿ ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನಿರಲಿ.


ರೆಬೆಕ್ಕಳು ಇಸಾಕನಿಗೆ, “ಹಿತ್ತಿಯ ಸ್ತ್ರೀಯರ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ. ಇಂಥ ಹಿತ್ತಿಯ ಸ್ತ್ರೀಯರಲ್ಲಿ ಒಬ್ಬಳನ್ನು ತನ್ನ ಹೆಂಡತಿಯಾಗಿ ಯಾಕೋಬನು ಮದುವೆ ಮಾಡಿಕೊಂಡರೆ, ನಾನು ಬದುಕಿರುವುದು ವ್ಯರ್ಥ,” ಎಂದಳು.


ಕಾನಾನ್ಯರ ಪುತ್ರಿಯರು ತನ್ನ ತಂದೆ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ಏಸಾವನು ತಿಳಿದು,


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು