Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:7 - ಕನ್ನಡ ಸಮಕಾಲಿಕ ಅನುವಾದ

7 ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು, ರೆಬೆಕ್ಕಳು ನೋಟಕ್ಕೆ ಚೆಲುವೆಯಾಗಿದ್ದುದರಿಂದ ಆಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು, ಆಕೆ ತನ್ನ ಹೆಂಡತಿಯೆಂದು ಹೇಳುವುದಕ್ಕೆ ಅಂಜಿ ಅವನು, “ಆಕೆಯು ನನ್ನ ತಂಗಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲಿಯ ಜನರು ಅವನ ಹೆಂಡತಿಯ ವಿಷಯವಾಗಿ ವಿಚಾರಿಸಿದರು. “ಅವಳು ನನ್ನ ತಂಗಿ”, ಎಂದು ಇಸಾಕನು ಹೇಳಿದನು. ರೆಬೆಕ್ಕಳು ಬಲು ಚೆಲುವೆಯಾಗಿದ್ದರಿಂದ ಆಕೆಯ ನಿಮಿತ್ತ ತನ್ನನ್ನು ಕೊಂದಾರು ಎಂದು ಹೆದರಿ ಹಾಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸಾಕನ ಹೆಂಡತಿಯಾದ ರೆಬೆಕ್ಕಳು ತುಂಬ ಸೌಂದರ್ಯವತಿಯಾಗಿದ್ದಳು. ಆ ಸ್ಥಳದ ಗಂಡಸರು ರೆಬೆಕ್ಕಳ ಬಗ್ಗೆ ಇಸಾಕನನ್ನು ಕೇಳಿದರು. ಇಸಾಕನು ಅವರಿಗೆ, “ಆಕೆ ನನ್ನ ತಂಗಿ” ಎಂದು ಹೇಳಿದನು. ರೆಬೆಕ್ಕಳು ತನಗೆ ಹೆಂಡತಿಯಾಗಬೇಕೆಂದು ಅವರಿಗೆ ತಿಳಿದರೆ ಆಕೆಯನ್ನು ತೆಗೆದುಕೊಳ್ಳಲು ಅವರು ತನ್ನನ್ನು ಕೊಲ್ಲಬಹುದೆಂಬ ಹೆದರಿಕೆಯಿಂದ ಇಸಾಕನು ಹಾಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:7
15 ತಿಳಿವುಗಳ ಹೋಲಿಕೆ  

ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ಗೆರಾರಿನಲ್ಲಿ ಅಬ್ರಹಾಮನು ತನ್ನ ಹೆಂಡತಿ ಸಾರಳ ವಿಷಯವಾಗಿ, “ಅವಳು ನನ್ನ ತಂಗಿ,” ಎಂದು ಹೇಳಿದ್ದನು. ಆದ್ದರಿಂದ ಗೆರಾರಿನ ಅರಸ ಅಬೀಮೆಲೆಕನು ಸಾರಳನ್ನು ಕರೆಯಿಸಿ ತನ್ನ ಅರಮನೆಗೆ ತೆಗೆದುಕೊಂಡನು.


ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ, ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ದಯಮಾಡಿ ಹೇಳಬೇಕು,” ಎಂದು ಹೇಳಿದನು.


ಆ ಹುಡುಗಿಯು ನೋಡುವುದಕ್ಕೆ ಬಹು ಸುಂದರಿಯಾಗಿದ್ದಳು, ಮದುವೆಯಾಗದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಯ ಬಳಿಗೆ ಹೋಗಿ, ತನ್ನ ಕೊಡವನ್ನು ತುಂಬಿಕೊಂಡು ಬಂದಳು.


ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ!


ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ಅವನು ನನಗೆ, ‘ಅವಳು ನನ್ನ ತಂಗಿ,’ ಎಂದು ಹೇಳಲಿಲ್ಲವೋ? ಅವಳೇ, ‘ಅವನು ನನ್ನ ಅಣ್ಣ,’ ಎಂದು ಹೇಳಿದ್ದಾಳೆ. ಆದ್ದರಿಂದ ನಾನು ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಹಸ್ತದಿಂದಲೂ ಇದನ್ನು ಮಾಡಿದ್ದೇನೆ,” ಎಂದನು.


ಅವನು ಈಜಿಪ್ಟನ್ನು ಸಮೀಪಿಸುತ್ತಿದ್ದಾಗ, ತನ್ನ ಹೆಂಡತಿ ಸಾರಯಳಿಗೆ, “ನೀನು ನೋಡುವುದಕ್ಕೆ ರೂಪವತಿಯೆಂದು ನನಗೆ ತಿಳಿದಿದೆ.


ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.


ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.


ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ, ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡುತ್ತಿದ್ದಾಗ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸಮಾಡುವುದನ್ನು ಕಂಡನು.


ಲೇಯಳ ಕಣ್ಣುಗಳು ಕಾಂತಿಹೀನವಾಗಿದ್ದವು. ಆದರೆ ರಾಹೇಲಳು ಸುಂದರಿಯೂ ರೂಪವತಿಯೂ ಆಗಿದ್ದಳು.


ಫರೋಹನ ಅಧಿಕಾರಿಗಳು ಆಕೆಯನ್ನು ನೋಡಿ, ಫರೋಹನ ಮುಂದೆ ಆಕೆಯನ್ನು ಹೊಗಳಿ, ಆ ಸ್ತ್ರೀಯನ್ನು ಅವನ ಅರಮನೆಗೆ ಕರೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು