Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:8 - ಕನ್ನಡ ಸಮಕಾಲಿಕ ಅನುವಾದ

8 ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ, ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡುತ್ತಿದ್ದಾಗ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸಮಾಡುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು, ಆ ಸ್ಥಳದಲ್ಲಿ ಬಹಳ ದಿವಸ ತಂಗಿದ್ದನು. ಒಂದು ದಿನ ಫಿಲಿಷ್ಟಿಯ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಆ ಸ್ಥಳದಲ್ಲಿ ಬಹಳ ದಿವಸ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಲ್ಲಿ ಇಸಾಕನು ಇದ್ದು ಬಹುಕಾಲವಾಗಿತ್ತು. ಒಮ್ಮೆ ಫಿಲಿಷ್ಟಿಯರ ರಾಜನಾದ ಅಬೀಮೆಲೆಕನು ತನ್ನ ಕಿಟಕಿಯಿಂದ ನೋಡಿದಾಗ, ಇಸಾಕನು ಮತ್ತು ಅವನ ಹೆಂಡತಿ ಸರಸವಾಡುತ್ತಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:8
8 ತಿಳಿವುಗಳ ಹೋಲಿಕೆ  

ಯುವಕನು ಕನ್ಯೆ ಯುವತಿಯನ್ನು ವರಿಸುವಂತೆ, ನಿನ್ನ ಜನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುವರು. ವರನು ವಧುವಿನ ಮೇಲೆ ಆನಂದ ಪಡುವ ಪ್ರಕಾರ, ನಿನ್ನ ದೇವರು ನಿನ್ನ ಮೇಲೆ ಆನಂದಿಸುವರು.


ನನ್ನ ಪ್ರಿಯನು ಜಿಂಕೆಯ ಹಾಗೆ ಇದ್ದಾನೆ. ದುಪ್ಪಿಯ ಮರಿಯ ಹಾಗೆಯೂ ಇದ್ದಾನೆ. ಇಗೋ! ಅವನು ನಮ್ಮ ಗೋಡೆಯ ಹಿಂದೆ ನಿಂತಿದ್ದಾನೆ. ಜಾಲಾಂತರಗಳಲ್ಲಿ ತನ್ನನ್ನು ತೋರಿಸಿ, ಕಿಟಿಕಿಗಳಿಂದ ನೋಡುತ್ತಿದ್ದಾನೆ.


ನಾನು ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ಇಣಕಿ ನೋಡಿದಾಗ,


“ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿಯಿಂದ ಕೂಗಿದಳು, ‘ಅವನ ರಥವು ಬರುವುದಕ್ಕೆ ಇಷ್ಟು ತಡವಾದದ್ದೇನು? ಅವನ ರಥಗಳ ಗಾಲಿಗಳು ಹಿಂದುಳಿದಿರುವುದೇನು?’


ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ.


ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು, ರೆಬೆಕ್ಕಳು ನೋಟಕ್ಕೆ ಚೆಲುವೆಯಾಗಿದ್ದುದರಿಂದ ಆಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು, ಆಕೆ ತನ್ನ ಹೆಂಡತಿಯೆಂದು ಹೇಳುವುದಕ್ಕೆ ಅಂಜಿ ಅವನು, “ಆಕೆಯು ನನ್ನ ತಂಗಿ” ಎಂದನು.


ಆಗ ಅಬೀಮೆಲೆಕನು ಇಸಾಕನನ್ನು ಕರೆದು, “ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು, ‘ಆಕೆಯು ನನ್ನ ತಂಗಿ,’ ಎಂದು ಏಕೆ ಹೇಳಿದೆ?” ಎಂದನು. ಇಸಾಕನು ಅವನಿಗೆ, “ನಾನು ಆಕೆಯ ನಿಮಿತ್ತ ಸಾಯಬಾರದೆಂದು ಹಾಗೆ ಹೇಳಿದೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು