Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಅಬೀಮೆಲೆಕನು ಇಸಾಕನನ್ನು ಕರೆದು, “ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು, ‘ಆಕೆಯು ನನ್ನ ತಂಗಿ,’ ಎಂದು ಏಕೆ ಹೇಳಿದೆ?” ಎಂದನು. ಇಸಾಕನು ಅವನಿಗೆ, “ನಾನು ಆಕೆಯ ನಿಮಿತ್ತ ಸಾಯಬಾರದೆಂದು ಹಾಗೆ ಹೇಳಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಅಬೀಮೆಲೆಕನು ಇಸಾಕನನ್ನು ಕರೆಯಿಸಿ, “ನಿಶ್ಚಯವಾಗಿ ಈಕೆಯ ನಿನ್ನ ಹೆಂಡತಿಯಲ್ಲವೇ, ತಂಗಿ ಎಂದು ಯಾಕೆ ಹೇಳಿದೆ” ಎಂದು ಕೇಳಲು ಇಸಾಕನು, “ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೂಡಲೆ ಅವನು ಇಸಾಕನನ್ನು ಕರೆಯಿಸಿ, “ಖಂಡಿತವಾಗಿ ಈಕೆ ನಿನ್ನ ಹೆಂಡತಿ; ಮತ್ತೆ ಆಕೆ ನಿನ್ನ ತಂಗಿ ಎಂದು ಏಕೆ ಹೇಳಿದೆ?” ಎಂದು ಕೇಳಿದನು. ಇಸಾಕನು, “ಈಕೆಯ ನಿಮಿತ್ತ ಜನರು ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಅವನು ಇಸಾಕನನ್ನು ಕರೆಸಿ - ನಿಶ್ಚಯವಾಗಿ ಈಕೆಯು ನಿನ್ನ ಹೆಂಡತಿಯಲ್ಲವೇ, ತಂಗಿ ಅಂತ ಯಾಕೆ ಹೇಳಿದಿ ಎಂದು ಕೇಳಲು ಇಸಾಕನು - ಜನರು ಈಕೆಯ ನಿವಿುತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಬೀಮೆಲೆಕನು ಇಸಾಕನನ್ನು ಕರೆದು, “ಈ ಸ್ತ್ರೀಯು ನಿನ್ನ ಹೆಂಡತಿ. ಅವಳು ನಿನ್ನ ತಂಗಿಯೆಂದು ಯಾಕೆ ನಮಗೆ ಹೇಳಿದೆ?” ಎಂದು ಕೇಳಿದನು. ಇಸಾಕನು ಅವನಿಗೆ, “ನೀನು ಆಕೆಯನ್ನು ತೆಗೆದುಕೊಳ್ಳಲು ನನ್ನನ್ನು ಕೊಲ್ಲಬಹುದೆಂಬ ಭಯದಿಂದ ಹಾಗೆ ಹೇಳಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:9
5 ತಿಳಿವುಗಳ ಹೋಲಿಕೆ  

ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ, ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡುತ್ತಿದ್ದಾಗ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸಮಾಡುವುದನ್ನು ಕಂಡನು.


ಆಗ ಅಬೀಮೆಲೆಕನು, “ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯನ್ನು ತೆಗೆದುಕೊಂಡಿದ್ದರೆ, ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ,” ಎಂದನು.


ಅನಂತರ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿ ಎಂದು ಯಾಕೆ ನನಗೆ ತಿಳಿಸಲಿಲ್ಲ?


ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟುಕಾಲ ನಿಮ್ಮೊಂದಿಗೆ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ಹಾಗಾದರೆ, ‘ತಂದೆಯನ್ನು ನಮಗೆ ತೋರಿಸಿರಿ’ ಎಂದು ನೀನು ಕೇಳುವುದು ಹೇಗೆ?


ಆಗ ಪೇತ್ರನು ಸಂಪೂರ್ಣವಾಗಿ ಎಚ್ಚರಗೊಂಡು, “ಈಗ ಕರ್ತದೇವರು ತಮ್ಮ ದೂತನನ್ನು ಕಳುಹಿಸಿ ಹೆರೋದನ ಹಿಡಿತದಿಂದಲೂ ಯೆಹೂದ್ಯ ಜನರು ನಿರೀಕ್ಷಿಸುತ್ತಿದ್ದ ಎಲ್ಲಾ ಕೇಡಿನಿಂದಲೂ ನನ್ನನ್ನು ಉಳಿಸಿ ಕಾಪಾಡಿರುವರು ಎಂದು ಈಗ ನನಗೆ ಗೊತ್ತಾಗಿದೆ,” ಎಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು