ಆದಿಕಾಂಡ 27:27 - ಕನ್ನಡ ಸಮಕಾಲಿಕ ಅನುವಾದ27 ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ, ಅವನನ್ನು ಹೀಗೆ ಆಶೀರ್ವದಿಸಿದನು, “ನನ್ನ ಮಗನ ವಾಸನೆಯು ಯೆಹೋವ ದೇವರು ಆಶೀರ್ವದಿಸಿದ ಹೊಲದ ವಾಸನೆಯಂತೆ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ, “ಆಹಾ, ನನ್ನ ಮಗನ ಸುವಾಸನೆಯು, ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇಸಾಕನು ಅವನ ಉಡುಗೆತೊಡಿಗೆಗಳ ಸುವಾಸನೆಯನ್ನು ಮೂಸಿನೋಡಿ, ಅವನಿಗೆ ಹೀಗೆಂದು ಆಶೀರ್ವಾದ ಮಾಡಿದನು - “ನನ್ನ ಸುಕುಮಾರನಿಂದೇಳುವ ಸುವಾಸನೆ ಸರ್ವೇಶ್ವರನಾಶೀರ್ವದಿಸಿದ ಮೊಗೆನೆಲದ ಸುವಾಸನೆಯಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನು ಹತ್ತರ ಬಂದು ಅವನಿಗೆ ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ನೋಡಿದಾಗ ಅವನನ್ನು ಆಶೀರ್ವದಿಸಿ - ಆಹಾ, ನನ್ನ ಮಗನ ಸುವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅದರಂತೆಯೇ ಯಾಕೋಬನು ತಂದೆಯ ಬಳಿಗೆ ಹೋಗಿ ಅವನಿಗೆ ಮುದ್ದಿಟ್ಟನು. ಇಸಾಕನು ಅವನ ಉಡುಪಿನ ವಾಸನೆಯನ್ನು ನೋಡಿ ಅವನನ್ನು ಹೀಗೆ ಆಶೀರ್ವದಿಸಿದನು: “ನನ್ನ ಮಗನ ಸುವಾಸನೆಯು ಯೆಹೋವನು ಆಶೀರ್ವದಿಸಿದ ಪ್ರದೇಶಗಳಂತಿದೆ. ಅಧ್ಯಾಯವನ್ನು ನೋಡಿ |