Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:29 - ಕನ್ನಡ ಸಮಕಾಲಿಕ ಅನುವಾದ

29 ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:29
40 ತಿಳಿವುಗಳ ಹೋಲಿಕೆ  

ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”


ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ಆದರೆ ಅದು ಕರೆಯುವಾತನಿಂದಲೇ, “ಹಿರಿಯನು ಕಿರಿಯವನಿಗೆ ಸೇವೆಮಾಡುವನು,” ಎಂದು ರೆಬೆಕ್ಕಳಿಗೆ ಹೇಳಲಾಗಿತ್ತು.


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ.


ಆ ಕಾಲದಲ್ಲಿ ಎದೋಮಿನೊಳಗೆ ಅರಸನಿರಲಿಲ್ಲ, ಅಧಿಪತಿಯು ಆಳುತ್ತಿದ್ದನು.


ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವ ದೇವರು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?


ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ನನ್ನ ಸಿವುಡು ಎದ್ದುನಿಂತಿತು. ಆಗ ನಿಮ್ಮ ಸಿವುಡುಗಳು ತಿರುಗಿ ನನ್ನ ಸಿವುಡಿಗೆ ಅಡ್ಡಬಿದ್ದವು,” ಎಂದನು.


ಇಸಾಕನು ಉತ್ತರವಾಗಿ ಏಸಾವನಿಗೆ, “ಅವನನ್ನು ನಿನಗೆ ದೊರೆಯನನ್ನಾಗಿ ನೇಮಿಸಿದ್ದೇನೆ, ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕರನ್ನಾಗಿ ಕೊಟ್ಟು, ಧಾನ್ಯದಿಂದಲೂ ಹೊಸ ದ್ರಾಕ್ಷಾರಸದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ?” ಎಂದನು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


“ಆಗ ನಾನು ಅವರಿಗೆ ಉತ್ತರವಾಗಿ, ‘ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ನೀವು ಇವರಲ್ಲಿ ಅತ್ಯಲ್ಪನಾದ ಒಬ್ಬನಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡಲಿಲ್ಲ,’ ಎಂದು ಹೇಳುವೆನು.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.


ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.


ಯಾಕೋಬನು, “ಈ ಹೊತ್ತು ನನಗೆ ಪ್ರಮಾಣಮಾಡು,” ಎಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ, ತನ್ನ ಜೇಷ್ಠ ಪುತ್ರನ ಹಕ್ಕನ್ನು ಅವನಿಗೆ ಮಾರಿದನು.


ಯೆಫೆತನ ಮೇರೆಗಳನ್ನು ದೇವರು ವಿಸ್ತರಿಸಲಿ. ಯೆಫೆತನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಯೆಫೆತನಿಗೆ ದಾಸನಾಗಿರಲಿ.”


ಇಸಾಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ, ಯಾಕೋಬನು ತನ್ನ ತಂದೆ ಇಸಾಕನ ಸಮ್ಮುಖದಿಂದ ಹೊರಟುಹೋದನು. ಆಮೇಲೆ ಅವನ ಸಹೋದರ ಏಸಾವನು ಬೇಟೆಯಿಂದ ಬಂದನು.


ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”


ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ತಿಳಿಸಿದಾಗ, ಅವನ ತಂದೆಯು ಅವನನ್ನು ಗದರಿಸಿ, “ನೀನು ಕಂಡ ಈ ಕನಸು ಏನು? ನಾನು, ನಿನ್ನ ತಾಯಿ, ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬರಬೇಕೋ?” ಎಂದನು.


ಎದೋಮು ಸ್ವಾಧೀನವಾಗುವುದು; ಸೇಯೀರನವರು ತನ್ನ ಶತ್ರುಗಳಿಗೆ ಸ್ವಾಧೀನವಾಗುವುದು; ಇಸ್ರಾಯೇಲು ಪರಾಕ್ರಮ ಕಾರ್ಯಮಾಡುವುದು,


ನಿನ್ನನ್ನು ಸೇವಿಸದ ಜನಾಂಗವೂ, ರಾಜ್ಯವೂ ನಾಶವಾಗುವುದು. ಆ ಜನಾಂಗಗಳು ಸಂಪೂರ್ಣವಾಗಿ ಹಾಳಾಗುವುವು.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು