ಆದಿಕಾಂಡ 27:31 - ಕನ್ನಡ ಸಮಕಾಲಿಕ ಅನುವಾದ31 ಅವನೂ ಸಹ ರುಚಿಯಾದ ಊಟವನ್ನು ಸಿದ್ಧಮಾಡಿ, ತನ್ನ ತಂದೆಯ ಬಳಿಗೆ ತಂದು, “ನನ್ನ ತಂದೆಯೇ, ಎದ್ದು ನನ್ನನ್ನು ಆಶೀರ್ವದಿಸುವಂತೆ ನಿನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅವನು ಕೂಡ ಸವಿ ಊಟವನ್ನು ಅಣಿಮಾಡಿ ತಂದೆಯ ಬಳಿಗೆ ತಂದು, “ಅಪ್ಪಾ, ಏಳಿ; ನಿನ್ನ ಮಗನಾದ ನಾನು ತಂದಿರುವ ಬೇಟೆಯ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ - ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಏಸಾವನು ಸಹ ತನ್ನ ತಂದೆಗೆ ಇಷ್ಟವಾದ ರೀತಿಯಲ್ಲಿ ವಿಶೇಷವಾದ ಆಹಾರವನ್ನು ಸಿದ್ಧಪಡಿಸಿ ತನ್ನ ತಂದೆಯ ಬಳಿಗೆ ತೆಗೆದುಕೊಂಡು ಬಂದನು. ಅವನು ತನ್ನ ತಂದೆಗೆ, “ಅಪ್ಪಾ ಎದ್ದೇಳು, ನಿನಗೋಸ್ಕರ ನಿನ್ನ ಮಗನು ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ತಿನ್ನು, ನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |