Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:38 - ಕನ್ನಡ ಸಮಕಾಲಿಕ ಅನುವಾದ

38 ಏಸಾವನು ತನ್ನ ತಂದೆಗೆ, “ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಆಶೀರ್ವದಿಸು,” ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 “ಅಪ್ಪಾ, ನಿಮ್ಮಲ್ಲಿ ಒಂದೇ ಆಶೀರ್ವಾದ ಮಾತ್ರ ಇತ್ತೋ? ನನ್ನನ್ನು, ನನ್ನನ್ನು ಕೂಡ ಆಶೀರ್ವಾದ ಮಾಡಪ್ಪಾ,” ಎಂದು ಗೋಳಾಡುತ್ತಾ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಏಸಾವನು ಅವನಿಗೆ - ಅಪ್ಪಾ, ತಂದೆಯೇ, ನಿನ್ನಲ್ಲಿ ಆ ಒಂದೇ ಆಶೀರ್ವಾದವಿತ್ತೋ? ಅಪ್ಪಾ, ನನ್ನನ್ನು, ನನ್ನನ್ನೂ ಆಶೀರ್ವದಿಸಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದರೆ ಏಸಾವನು ತನ್ನ ತಂದೆಯನ್ನು ಮತ್ತೆ ಬೇಡತೊಡಗಿದನು. “ಅಪ್ಪಾ ನನಗಾಗಿ ಒಂದಾದರೂ ಆಶೀರ್ವಾದವಿಲ್ಲವೇ? ಅಪ್ಪಾ, ನನ್ನನ್ನು ಸಹ ಆಶೀರ್ವದಿಸು” ಎಂದು ಏಸಾವನು ಅಳಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:38
8 ತಿಳಿವುಗಳ ಹೋಲಿಕೆ  

ತರುವಾಯ ಅವನು ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಬಯಸಿ, ಕಣ್ಣೀರನ್ನು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲಾದವನೆಂದು ನೀವು ಬಲ್ಲಿರಿ.


ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ, ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ, “ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು,” ಎಂದನು.


ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.


ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.


ಅದಕ್ಕೆ ಏಸಾವನು, “ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ? ಅವನು ನನ್ನನ್ನು ಎರಡು ಸಾರಿ ವಂಚಿಸಿದ್ದಾನೆ. ಅವನು ನನ್ನ ಚೊಚ್ಚಲತನವನ್ನು ತೆಗೆದುಕೊಂಡಿದ್ದಾನೆ. ಇಗೋ, ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸಲಿಲ್ಲವೋ?” ಎಂದನು.


ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು