Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:7 - ಕನ್ನಡ ಸಮಕಾಲಿಕ ಅನುವಾದ

7 ‘ನನಗೋಸ್ಕರ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಂದು, ನಾನು ಇಷ್ಟಪಡುವ ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ, ಆಗ ನಾನು ಸಾಯುವುದಕ್ಕಿಂತ ಮುಂಚೆ ಊಟಮಾಡಿ, ಯೆಹೋವ ದೇವರ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸುವೆನು,’ ಎಂದು ಹೇಳಿದ್ದನ್ನು ನಾನು ಕೇಳಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಾ, ಅದರಿಂದ ನನಗೆ ಸವಿ ಊಟವನ್ನು ಅಣಿಮಾಡಿ ಬಡಿಸು; ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಮನಸಾರೆ ಆಶೀರ್ವದಿಸುತ್ತೇನೆ,’ ಎಂದು ಹೇಳಿದ್ದನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಹೋಗಿ ಬೇಟೆಯಾಡಿ ಬೇಟೇ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವದಕ್ಕಿಂತ ಮುಂಚೆ ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆಂದು ಹೇಳುವದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನ ತಂದೆ ಅವನಿಗೆ, ‘ನನಗೋಸ್ಕರ ಒಂದು ಪ್ರಾಣಿಯನ್ನು ಬೇಟೆಯಾಡಿಕೊಂಡು ಬಂದು ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:7
7 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯೆಹೋಶುವನು ಅವರಿಗೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಯೆರಿಕೋವೆಂಬ ಈ ನಗರವನ್ನು ಮತ್ತೆ ಕಟ್ಟುವವನು, ಯೆಹೋವ ದೇವರ ದೃಷ್ಟಿಯಲ್ಲಿ ಶಾಪಗ್ರಸ್ತನಾಗುವನು. “ಅದರ ಅಸ್ತಿವಾರವನ್ನು ಹಾಕುವವನು, ಅವನು ತನ್ನ ಚೊಚ್ಚಲು ಮಗನನ್ನು ಕಳೆದುಕೊಳ್ಳುವನು. ಪಟ್ಟಣದ ಬಾಗಿಲುಗಳನ್ನಿಡುವಾಗ ತನ್ನ ಕಿರಿ ಮಗನನ್ನು ಕಳೆದುಕೊಳ್ಳುವನು.”


ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ.


ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:


ನಾನು ಇಷ್ಟಪಡುವ ರುಚಿಯಾದ ಊಟವನ್ನೂ ಸಿದ್ಧಮಾಡಿ ತೆಗೆದುಕೊಂಡು ಬಾ. ಆಗ ಸಾಯುವುದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುವಂತೆ ಅದನ್ನು ಊಟಮಾಡುವೆನು,” ಎಂದನು.


ಆಗ ರೆಬೆಕ್ಕಳು ತನ್ನ ಮಗ ಯಾಕೋಬನಿಗೆ, “ನಿನ್ನ ತಂದೆ ನಿನ್ನ ಸಹೋದರ ಏಸಾವನಿಗೆ,


ಆದ್ದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು.


ಆಗ ಯಾಕೋಬನು ಹೋಗಿ ಅವುಗಳನ್ನು ಹಿಡಿದು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು, ಅವನ ತಂದೆಯು ಇಷ್ಟಪಡುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು