ಆದಿಕಾಂಡ 28:11 - ಕನ್ನಡ ಸಮಕಾಲಿಕ ಅನುವಾದ11 ಅವನು ಒಂದು ಸ್ಥಳಕ್ಕೆ ಸೇರಿದಾಗ, ಸೂರ್ಯಾಸ್ತಮವಾದದ್ದರಿಂದ ಅಲ್ಲಿ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದು ತಲೆ ದಿಂಬನ್ನಾಗಿ ಇಟ್ಟುಕೊಂಡು, ಆ ಸ್ಥಳದಲ್ಲಿ ಮಲಗಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪ್ರಯಾಣಮಾಡುತ್ತಾ ಅವನು ಒಂದು ಸ್ಥಳಕ್ಕೆ ಬಂದು ಸೇರಿದನು. ಹೊತ್ತು ಮುಳುಗಿದ್ದ ಕಾರಣ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲೇ ಮಲಗಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ಹೋಗುತ್ತಿರಲು ಒಂದು ಸ್ಥಳಕ್ಕೆ ಸೇರಿದಾಗ ಹೊತ್ತು ಮುಣುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆಗಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯಾಕೋಬನು ಪ್ರಯಾಣ ಮಾಡುತ್ತಿರುವಾಗ ಸೂರ್ಯಾಸ್ತವಾಯಿತು. ಆದ್ದರಿಂದ ಯಾಕೋಬನು ಆ ರಾತ್ರಿ ಇಳಿದುಕೊಳ್ಳಲು ಒಂದು ಸ್ಥಳಕ್ಕೆ ಹೋದನು. ಯಾಕೋಬನು ಆ ಸ್ಥಳದಲ್ಲಿ ಒಂದು ಕಲ್ಲನ್ನು ಕಂಡು ಅದರ ಮೇಲೆ ತಲೆಯಿಟ್ಟು ಮಲಗಿಕೊಂಡನು. ಅಧ್ಯಾಯವನ್ನು ನೋಡಿ |