ಆದಿಕಾಂಡ 28:12 - ಕನ್ನಡ ಸಮಕಾಲಿಕ ಅನುವಾದ12 ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ರಾತ್ರಿ ಅವನಿಗೆ ಒಂದು ಕನಸು ಬಿತ್ತು, ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೆಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ರಾತ್ರಿ ಅವನು ಕನಸುಕಂಡನು. ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೇಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು; ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು. ಅಧ್ಯಾಯವನ್ನು ನೋಡಿ |