Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:13 - ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:13
40 ತಿಳಿವುಗಳ ಹೋಲಿಕೆ  

ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಆಗ ಯಾಕೋಬನು ಯೋಸೇಫನಿಗೆ, “ಸರ್ವಶಕ್ತ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು, ನನ್ನನ್ನು ಆಶೀರ್ವದಿಸಿದರು.


ಇದಲ್ಲದೆ ಅಬ್ರಹಾಮನಿಗೂ, ಇಸಾಕನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಕೊಡುವೆನು,” ಎಂದರು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.


ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.


ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.


ದೇವರು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗುವುದಕ್ಕೆ ಭಯಪಡಬೇಡ. ಏಕೆಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡ ಜನಾಂಗವಾಗಮಾಡುವೆನು.


ಹೆರುವುದರಲ್ಲಿ ಆಕೆಯು ಕಷ್ಟಪಡುತ್ತಿದ್ದಾಗ, ಸೂಲಗಿತ್ತಿಯು ಅವಳಿಗೆ, “ನೀನು ಭಯಪಡಬೇಡ, ಈ ಮಗನನ್ನು ಸಹ ನೀನು ಪಡೆಯುವೆ,” ಎಂದಳು.


ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ,


ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.


ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ನೀನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೂ, ನಿನ್ನ ಸಂತತಿಗೂ ಕೊಡಲಿ,” ಎಂದನು.


ಈ ದೇಶದಲ್ಲಿ ಪ್ರವಾಸಿಯಾಗಿರು. ಆಗ ನಾನು ನಿನ್ನ ಸಂಗಡ ಇದ್ದು, ನಿನ್ನನ್ನು ಆಶೀರ್ವದಿಸುವೆನು. ನಿನಗೂ, ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು.


“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”


ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.


ಎದ್ದು ದೇಶದ ಉದ್ದಗಲಕ್ಕೂ ನಡೆದಾಡು. ನಾನು ನಿನಗೆ ಅದನ್ನು ಕೊಡುವೆನು,” ಎಂದರು.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಅವರಿಗೆ, “ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದ ಹಾಗೆ ಈಗ ಇಲ್ಲದಿರುವುದನ್ನು ನಾನು ನೋಡಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಕಡೆಗೆ ಇದ್ದಾರೆ.


ನೀನು ಸ್ತಂಭವನ್ನು ಅಭಿಷೇಕಿಸಿ, ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದಿಂದ ಹೊರಟು, ನಿನ್ನ ಬಂಧುಗಳ ದೇಶಕ್ಕೆ ಹಿಂದಿರುಗಿ ಹೋಗು,’ ಎಂದು ಹೇಳಿದ್ದಾರೆ,” ಎಂದನು.


ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.


ದೇವರು ಅವರ ನರಳಾಟವನ್ನು ಕೇಳಿದಾಗ, ಅವರು ಅಬ್ರಹಾಮ, ಇಸಾಕ ಮತ್ತು ಯಾಕೋಬನ ಸಂಗಡ ತಾವು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡರು.


ಆಗ ಯೆಹೋವ ದೇವರು ಅವನಿಗೆ, “ಇದರಿಂದ ಆ ಜನರು ತಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗೂ ಯಾಕೋಬರ ದೇವರಾಗಿರುವ ಯೆಹೋವ ದೇವರು ನಿನಗೆ ಪ್ರಕಟವಾಗಿದ್ದು ನಿಜ ಎಂಬುದನ್ನು ನಂಬುವರು,” ಎಂದರು.


ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.


ಆತನು ನನಗೆ ಹೀಗೆ ತೋರಿಸಿದನು. ಯೆಹೋವ ದೇವರು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದರು. ಆತನ ಕೈಯಲ್ಲಿ ನೂಲುಗುಂಡು ಇತ್ತು.


ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕಮಾಡಿಕೊಳ್ಳಿರಿ.


“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು