Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:14 - ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ಸಂತತಿಯು ಭೂವಿುಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂವಿುಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:14
26 ತಿಳಿವುಗಳ ಹೋಲಿಕೆ  

ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”


ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.


ನೀವು ಪ್ರವಾದಿಗಳ ಮತ್ತು ನಿಮ್ಮ ಪಿತೃಗಳೊಂದಿಗೆ ದೇವರು ಮಾಡಿಕೊಂಡ ಒಡಂಬಡಿಕೆಯ ಮಕ್ಕಳಾಗಿದ್ದೀರಿ. ಏಕೆಂದರೆ ದೇವರು, ‘ನಿನ್ನ ಸಂತತಿಯ ಮುಖಾಂತರವಾಗಿ ಭೂಲೋಕದ ಎಲ್ಲಾ ಕುಟುಂಬಗಳಿಗೆ ಆಶೀರ್ವಾದವುಂಟಾಗುವುದು,’ ಎಂದು ಅಬ್ರಹಾಮನಿಗೆ ಹೇಳಿದರು.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ಅಬ್ರಹಾಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗವಾಗುವನು, ಅವನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.


ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.


ಲೋಟನು ಅಬ್ರಾಮನಿಂದ ಹೋದ ಮೇಲೆ ಯೆಹೋವ ದೇವರು ಅವನಿಗೆ, “ಈಗ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ಕಣ್ಣೆತ್ತಿ ನೋಡು.


ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,” ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ.


ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.


ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆ ನಿಮ್ಮ ಮೇರೆಯನ್ನು ವಿಸ್ತಾರಮಾಡುವರು. ಆಗ ನೀವು, “ಮಾಂಸಾಹಾರವನ್ನು ತಿನ್ನಲು ಇಷ್ಟಪಡುತ್ತೇನೆ,” ಎಂದು ಹೇಳಿದರೆ, ತಿನ್ನಬಹುದು.


ಧೂಳಿನಷ್ಟು ಅಸಂಖ್ಯವಾದ ಯಾಕೋಬರನ್ನು ಎಣಿಸುವುದಕ್ಕೂ, ಇಸ್ರಾಯೇಲಿನ ನಾಲ್ಕನೆಯ ಒಂದು ಪಾಲನ್ನು ಲೆಕ್ಕ ಮಾಡುವುದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು. ನನ್ನ ಅಂತ್ಯವು ಅವರಂತೆಯೇ ಆಗಲಿ.”


‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡುವೆನು ಮತ್ತು ನಿನ್ನ ಸಂತತಿಯನ್ನು ಎಣಿಸುವುದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು,’ ಎಂದು ನನಗೆ ಹೇಳಿದ್ದೀರಲ್ಲಾ?” ಎಂದನು.


ಆಗ ಮುದ್ರೆ ಹೊಂದಿರುವವರ ಸಂಖ್ಯೆಯು ನನಗೆ ಕೇಳಿಸಿತು. ಇಸ್ರಾಯೇಲಿನ ಎಲ್ಲಾ ಕುಲಗಳಿಂದ ಮುದ್ರೆಹಾಕಿಸಿಕೊಂಡವರು 1,44,000 ಜನರು.


ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ಅದಕ್ಕೆ ಅವನ ತಂದೆಯು ಒಪ್ಪದೆ, “ನನಗೆ ಗೊತ್ತು. ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವುದಲ್ಲದೆ ಅವನು ದೊಡ್ಡವನಾಗುವನು. ಆದರೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತತಿಯು ಜನಾಂಗಗಳ ಸಮೂಹವಾಗುವುದು,” ಎಂದನು.


ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ,


ಈಗ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವು ದೃಢವಾಗಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯಾತ ಜನರ ಮೇಲೆ ನನ್ನನ್ನು ಅರಸನನ್ನಾಗಿ ಮಾಡಿದ್ದೀರಿ.


ನೀನು ಬಲಗಡೆಗೂ, ಎಡಗಡೆಗೂ ಹಬ್ಬಿಕೊಳ್ಳುವೆ. ನಿನ್ನ ಸಂತಾನವು ಜನಾಂಗಗಳನ್ನು ವಶಪಡಿಸಿಕೊಂಡು, ಹಾಳಾದ ಪಟ್ಟಣಗಳನ್ನು ನಿವಾಸವಾಗ ಮಾಡುವುದು.


ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು