Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:17 - ಕನ್ನಡ ಸಮಕಾಲಿಕ ಅನುವಾದ

17 ಅವನು ಭಯಪಟ್ಟು, “ಈ ಸ್ಥಳವು ಎಷ್ಟೋ ಗಂಭೀರವಾದದ್ದು, ಇದು ದೇವರ ಮನೆಯೇ ಹೊರತು ಬೇರೆಯಲ್ಲ. ಇದೇ ಪರಲೋಕದ ಬಾಗಿಲು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಲ್ಲದೆ ಭಯಭಕ್ತಿಯಿಂದ, “ಇದು ಮಹಾಗಂಭೀರವಾದ ಸ್ಥಳ; ದೇವರ ಸ್ಥಾನವೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದು ನನಗೆ ತಿಳಿಯದೆ ಹೋಯಿತು ಅಂದುಕೊಂಡು ಭಯಪಟ್ಟವನಾಗಿ - ಈ ಸ್ಥಳವು ಎಷ್ಟೋ ಭಯಂಕರವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದು ಪರಲೋಕದ ಬಾಗಿಲು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಕೋಬನಿಗೆ ಭಯವಾಗಿತ್ತು. ಅವನು, “ಇದು ತುಂಬ ಮಹತ್ವವಾದ ಸ್ಥಳ. ಇದು ದೇವರ ಮನೆ. ಇದು ಸ್ವರ್ಗಕ್ಕೆ ಬಾಗಿಲು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:17
16 ತಿಳಿವುಗಳ ಹೋಲಿಕೆ  

ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ.


ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.


ಆಗ ಕರ್ತದೇವರ ದೂತನು ಅವರಿಗೆ ಪ್ರತ್ಯಕ್ಷನಾದನು. ಕರ್ತದೇವರ ಮಹಿಮೆಯು ಅವರ ಸುತ್ತಲೂ ಪ್ರಕಾಶಿಸಿತು, ಅವರು ಬಹಳವಾಗಿ ಹೆದರಿದರು.


ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.


ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಂಡದ್ದರಿಂದ ನಿಶ್ಚಯವಾಗಿ ಸಾಯುವೆವು,” ಎಂದನು.


ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.


ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ


ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವುದರಿಂದ


ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು.


ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.


ದೇವರೇ, ನಿಮ್ಮ ಪರಿಶುದ್ಧ ಸ್ಥಳದಲ್ಲಿ ನೀವು ಅತಿಶಯವಾಗಿದ್ದೀರಿ. ಇಸ್ರಾಯೇಲರ ದೇವರೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುವರು. ದೇವರಿಗೆ ಸ್ತುತಿಯಾಗಲಿ.


ಯಾಕೋಬನು ಬೆಳಿಗ್ಗೆ ಎದ್ದು, ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು, ಅದನ್ನು ಸ್ತಂಭವಾಗಿ ನೆಟ್ಟು, ಅದರ ಮೇಲೆ ಎಣ್ಣೆಯನ್ನು ಹೊಯ್ದನು.


ಆಗ ದೇವರು ಅವನಿಗೆ, “ಇಲ್ಲಿ ಸಮೀಪಕ್ಕೆ ಬರಬೇಡ, ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು