Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:19 - ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಅವನು ಆ ಸ್ಥಳಕ್ಕೆ, ಬೇತೇಲ್, ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಸ್ಥಳಕ್ಕೆ, ಲೂಜ್ ಎಂದು ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ‘ಲೂಜ್’ ಎಂದು ಹೆಸರು ಪಡೆದಿದ್ದ ಆ ಊರಿಗೆ ‘ಬೇತೇಲ್’ ಎಂದು ನಾಮಕರಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಅಲ್ಲಿರುವ ಊರಿಗೆ ಮೊದಲು ಲೂಜ್ ಎಂದು ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಸ್ಥಳದ ಹೆಸರು ಲೂಜ್. ಆದರೆ ಯಾಕೋಬನು ಅದಕ್ಕೆ ಬೇತೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:19
21 ತಿಳಿವುಗಳ ಹೋಲಿಕೆ  

ಆಗ ಯಾಕೋಬನು ಯೋಸೇಫನಿಗೆ, “ಸರ್ವಶಕ್ತ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು, ನನ್ನನ್ನು ಆಶೀರ್ವದಿಸಿದರು.


ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.


“ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ.


ಒಂದನ್ನು ಬೇತೇಲಿನಲ್ಲಿಯೂ, ಒಂದನ್ನು ದಾನಿನಲ್ಲಿಯೂ ಸ್ಥಾಪಿಸಿದನು.


ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.


ಅವನು ಒಂದು ಸ್ಥಳಕ್ಕೆ ಸೇರಿದಾಗ, ಸೂರ್ಯಾಸ್ತಮವಾದದ್ದರಿಂದ ಅಲ್ಲಿ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದು ತಲೆ ದಿಂಬನ್ನಾಗಿ ಇಟ್ಟುಕೊಂಡು, ಆ ಸ್ಥಳದಲ್ಲಿ ಮಲಗಿಕೊಂಡನು.


ನೀನು ಸ್ತಂಭವನ್ನು ಅಭಿಷೇಕಿಸಿ, ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದಿಂದ ಹೊರಟು, ನಿನ್ನ ಬಂಧುಗಳ ದೇಶಕ್ಕೆ ಹಿಂದಿರುಗಿ ಹೋಗು,’ ಎಂದು ಹೇಳಿದ್ದಾರೆ,” ಎಂದನು.


ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನರಸಹಿತವಾಗಿ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದನು.


ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ, ಆ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ, ಪಾನಾರ್ಪಣೆ ಮಾಡಿ, ಅದರ ಮೇಲೆ ಎಣ್ಣೆಯನ್ನು ಹೊಯ್ದನು.


ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.


ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆಯ್ದುಕೊಂಡು, ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ, ಆಯಿ ಎಂಬ ಪಟ್ಟಣದ ನಡುವೆ ಹೊಂಚಿಹಾಕಿಕೊಂಡಿರಲು ಅವರನ್ನು ಇಟ್ಟನು.


ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು, ಲೂಜಿನ ದಕ್ಷಿಣದ ಕಡೆಗೆ ಹೋಗಿ, ಅಟಾರೋತ್ ಅದ್ದಾರಿನ ಕೆಳಗಿನ ಬೇತ್ ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವುದು.


ಅವನು ಪ್ರತಿವರ್ಷ ಹೊರಟು ಬೇತೇಲನ್ನೂ, ಗಿಲ್ಗಾಲನ್ನೂ, ಮಿಚ್ಪೆಯನ್ನೂ ಸುತ್ತಿಕೊಂಡು ಹೋಗಿ ಆ ಸ್ಥಳಗಳಲ್ಲೆಲ್ಲಾ ಇಸ್ರಾಯೇಲರಿಗೆ ನ್ಯಾಯತೀರಿಸಿದನು.


“ನೀನು ಆ ಸ್ಥಳವನ್ನು ಬಿಟ್ಟು, ಆ ಕಡೆ ದಾಟಿ, ತಾಬೋರಿನ ಹತ್ತಿರವಿರುವ ಅಲ್ಲೋನ್ ವೃಕ್ಷದ ಬಳಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವೆ.


ಅಲ್ಲಿ ಅವನು ಬಲಿಪೀಠವನ್ನು ಕಟ್ಟಿ, ತಾನು ತನ್ನ ಸಹೋದರನ ಬಳಿಯಿಂದ ಓಡಿಹೋದಾಗ, ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.


ಬೇತೇಲಿನಿಂದ ಅಂದರೆ ಲೂಜ್ ಅಲ್ಲಿಂದ ಅರ್ಕಿಯ ಮೇರೆಗಳಾದ ಅಟಾರೋತನ್ನು ದಾಟಿ,


ಆಗ ಇಸ್ರಾಯೇಲರೆಲ್ಲರೂ ಸಮಸ್ತ ಸೇನೆಯೂ ಬೇತೇಲಿಗೆ ಹೊರಟು, ಅಲ್ಲಿ ಅಳುತ್ತಾ ಯೆಹೋವ ದೇವರ ಮುಂದೆ ಕುಳಿತುಕೊಂಡು, ಆ ಸಂಜೆಯವರೆಗೆ ಉಪವಾಸವಾಗಿದ್ದು, ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.


ಆಗ ಎಲೀಯನು ಎಲೀಷನಿಗೆ, “ನೀನು ದಯಮಾಡಿ ಇಲ್ಲಿ ಇರು. ಯೆಹೋವ ದೇವರು ನನ್ನನ್ನು ಬೇತೇಲಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕೆ ಎಲೀಷನು, “ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.


ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ, ಅವುಗಳ ಗ್ರಾಮಗಳನ್ನೂ ವಶಪಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು