Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:2 - ಕನ್ನಡ ಸಮಕಾಲಿಕ ಅನುವಾದ

2 ಕೂಡಲೇ ನಿನ್ನ ತಾಯಿಯ ತಂದೆ ಬೆತೂಯೇಲನು ಇರುವ ಪದ್ದನ್ ಅರಾಮಿಗೆ ಹೋಗು. ನಿನ್ನ ತಾಯಿಯ ಸಹೋದರ ಲಾಬಾನನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಹೆಂಡತಿಯನ್ನಾಗಿ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮೆಸಪೊಟೇಮಿಯಾ ನಾಡಿನಲ್ಲಿರುವ ನಿನ್ನ ತಾತ ಬೆತೂವೇಲನ ಮನೆಗೆ ಹೊರಟುಹೋಗು. ಅಲ್ಲಿ ನಿನ್ನ ಸೋದರಮಾವನಾದ ಲಾಬಾನನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊ,” ಎಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪದ್ದನ್ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟುಹೋಗಿ ಅಲ್ಲಿ ನಿನ್ನ ಸೋದರ ಮಾವನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೋ ಎಂದು ಅಪ್ಪಣೆಕೊಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಈ ಸ್ಥಳವನ್ನು ಬಿಟ್ಟು ಪದ್ದನ್‌ಅರಾಮಿಗೆ ಹೊರಟು ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೋಗು. ನಿನ್ನ ತಾಯಿಯ ಅಣ್ಣನಾದ ಲಾಬಾನನು ಅಲ್ಲಿ ವಾಸಿಸುತ್ತಿದ್ದಾನೆ. ಅವನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:2
16 ತಿಳಿವುಗಳ ಹೋಲಿಕೆ  

ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.


ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು. ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ, ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.


ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ, ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಪುತ್ರಪುತ್ರಿಯರೆಲ್ಲಾ ಸೇರಿ ಒಟ್ಟು ಮೂವತ್ತು ಮೂರು ಮಂದಿ.


ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ, ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ, ಅವನನ್ನು ಆಶೀರ್ವದಿಸಿದರು.


ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.


ಇಸಾಕನು ಯಾಕೋಬನನ್ನು ಕಳುಹಿಸಿದಾಗ, ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿ ರೆಬೆಕ್ಕಳ ಸಹೋದರ ಅರಾಮಿನವನಾದ ಬೆತೂಯೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.


ಅದಕ್ಕೆ ಲಾಬಾನನು ಮತ್ತು ಬೆತೂಯೇಲನು, “ಈ ಕಾರ್ಯವು ಯೆಹೋವ ದೇವರಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು


ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿದನು.


ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನೂ, ತನ್ನ ಯಜಮಾನನಿಂದ ಎಲ್ಲಾ ತರಹದ ವಸ್ತ್ರಗಳನ್ನೂ ತೆಗೆದುಕೊಂಡು ಅರಾಮ್ ನಹರೈಮಿಗೆ ಹೊರಟು, ನಾಹೋರನು ವಾಸವಾಗಿದ್ದ ಊರನ್ನು ಸೇರಿದನು.


ತನ್ನ ಎಲ್ಲಾ ಪಶುಗಳನ್ನೂ, ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ, ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶದಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ತೆಗೆದುಕೊಂಡು ಹೊರಟನು.


ಆಗ ಯಾಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.


ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸೇರಿ, ಅದರ ಮುಂದೆ ತನ್ನ ಗುಡಾರಗಳನ್ನು ಹಾಕಿದನು.


ನನ್ನ ದೇಶಕ್ಕೂ, ಬಂಧುಗಳ ಬಳಿಗೂ ಹೋಗಿ ನನ್ನ ಮಗ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಂಡು ಬರುತ್ತೇನೆಂದು ಪರಲೋಕದ ಮತ್ತು ಭೂಲೋಕದ ದೇವರಾಗಿರುವ ಯೆಹೋವ ದೇವರ ಮೇಲೆ ನೀನು ನನಗೆ ಪ್ರಮಾಣಮಾಡಬೇಕು,” ಎಂದನು.


ಪ್ರವಾದಿಯಿಂದ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಬರಮಾಡಿ, ಆ ಪ್ರವಾದಿಯಿಂದಲೇ ಆತನು ಅವರನ್ನು ಕಾಪಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು