Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:21 - ಕನ್ನಡ ಸಮಕಾಲಿಕ ಅನುವಾದ

21 ನನ್ನನ್ನು ಸಮಾಧಾನವಾಗಿ ನನ್ನ ತಂದೆಯ ಮನೆಗೆ ತಿರುಗಿ ಬರಮಾಡಿದರೆ, ಯೆಹೋವ ನನಗೆ ದೇವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಮರಳಿ ಬರಮಾಡಿದರೆ ಸರ್ವೇಶ್ವರಸ್ವಾಮಿಯೇ ನನಗೆ ದೇವರು ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತಿರಿಗಿ ನನ್ನನ್ನು ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನ್ನ ದೇವರಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ಸಮಾಧಾನದಿಂದ ನನ್ನ ತಂದೆಯ ಮನೆಗೆ ಹಿಂತಿರುಗಿ ಬರುವಂತೆ ಮಾಡಿದರೆ ಯೆಹೋವನೇ ನನ್ನ ದೇವರಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:21
8 ತಿಳಿವುಗಳ ಹೋಲಿಕೆ  

ನಾನು ಅಮ್ಮೋನಿಯರನ್ನು ಜಯಿಸಿ ಹಿಂತಿರುಗಿ ಬರುವಾಗ, ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥದ್ದು ಯೆಹೋವ ದೇವರದಾಗಿರುವುದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು,” ಎಂದನು.


ನೀವು ಈ ಹೊತ್ತು, ಯೆಹೋವ ದೇವರೇ ನಮಗೆ ದೇವರು ಎಂದೂ, ಅವರ ಮಾರ್ಗಗಳಲ್ಲಿ ನಡೆದು, ಅವರು ಹೇಳಿದ ಆಜ್ಞಾವಿಧಿನಿಯಮಗಳನ್ನು ಪಾಲಿಸಿ, ಅವರ ಮಾತಿಗೆ ವಿಧೇಯರಾಗಿರುತ್ತೇವೆ ಎಂದೂ ದೃಢವಾಗಿ ಹೇಳಿದ್ದೀರಿ.


ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.


ಏಕೆಂದರೆ, ‘ಯೆಹೋವ ದೇವರು ನನ್ನನ್ನು ಯೆರೂಸಲೇಮಿಗೆ ತಿರುಗಿ ನಿಜವಾಗಿಯೂ ಬರಮಾಡಿದರೆ, ನಾನು ಯೆಹೋವ ದೇವರನ್ನು ಸೇವಿಸುವೆನು,’ ಎಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಹರಕೆ ಮಾಡಿಕೊಂಡಿದ್ದನು,” ಎಂದನು.


“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.


ನಾಮಾನನು, “ಹಾಗಾದರೆ ಎರಡು ಹೇಸರಗತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ಕೊಡುವಂತೆ ಮಾಡು. ಏಕೆಂದರೆ ನಿನ್ನ ಸೇವಕನು ಇನ್ನು ಮೇಲೆ ಯೆಹೋವ ದೇವರಿಗೆ ಹೊರತಾಗಿ ಅನ್ಯ ದೇವರುಗಳಿಗೆ ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸನು.


ಮೆಫೀಬೋಶೆತನು ಅರಸನಿಗೆ, “ಹೌದು, ಅರಸನಾದ ನನ್ನ ಒಡೆಯನು ಸಮಾಧಾನದಿಂದ ತಿರುಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಸಮಸ್ತವನ್ನು ತೆಗೆದುಕೊಳ್ಳಲಿ,” ಎಂದನು.


ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು