Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:3 - ಕನ್ನಡ ಸಮಕಾಲಿಕ ಅನುವಾದ

3 ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಿ, ನೀನು ದೊಡ್ಡ ಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:3
23 ತಿಳಿವುಗಳ ಹೋಲಿಕೆ  

ಆಗ ಯಾಕೋಬನು ಯೋಸೇಫನಿಗೆ, “ಸರ್ವಶಕ್ತ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು, ನನ್ನನ್ನು ಆಶೀರ್ವದಿಸಿದರು.


ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.


ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.


ದೇವರು ನೋಹನನ್ನೂ, ಅವನ ಪುತ್ರರನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿ, ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.


ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.


ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.


ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು.


ಇದಲ್ಲದೆ ಅವರು ರೆಬೆಕ್ಕಳನ್ನು ಹೀಗೆಂದು ಆಶೀರ್ವದಿಸಿದರು: “ನಮ್ಮ ಸಹೋದರಿಯೇ, ನೀನು ಸಹಸ್ರ ಸಹಸ್ರ ಮಕ್ಕಳಿಗೆ ತಾಯಿಯಾಗು. ನಿನ್ನ ಸಂತಾನದವರು ತಮ್ಮ ವೈರಿಗಳ ಪ್ರದೇಶಗಳನ್ನು ಸ್ವಾಧೀನಮಾಡಿಕೊಳ್ಳಲಿ.”


ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ.


ಇದಲ್ಲದೆ, “ನಾನು ನಿಮಗೆ ತಂದೆಯಾಗಿರುವೆನು. ನೀವು ನನಗೆ ಪುತ್ರಪುತ್ರಿಯರು ಆಗಿರುವಿರಿ,” ಎಂದು ಸರ್ವಶಕ್ತ ಆಗಿರುವ ಕರ್ತದೇವರು ಹೇಳುತ್ತಾರೆ.


ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. ಗರ್ಭಫಲವು ದೇವರ ಬಹುಮಾನ.


ನಾನೇ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಸರ್ವಶಕ್ತ ದೇವರೆಂದು ಪ್ರಕಟಿಸಿಗೊಂಡೆನು. ಆದರೆ ಯೆಹೋವ ದೇವರೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಪೂರ್ಣವಾಗಿ ತಿಳಿಸಲಿಲ್ಲ.


ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.


ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ನಾನು ಅವನನ್ನು ಸಹ ಆಶೀರ್ವದಿಸುವೆನು. ಅವನನ್ನು ಅಭಿವೃದ್ಧಿ ಮಾಡಿ, ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.


ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ಆಗ ಇಸಾಕನು ಬಹಳವಾಗಿ ನಡುಗುತ್ತಾ, “ನೀನು ಬರುವುದಕ್ಕಿಂತ ಮೊದಲು ಬೇಟೆಯಾಡಿ ನನಗೆ ಊಟ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವುದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವದಿಸಿದೆನು. ಅವನು ಆಶೀರ್ವಾದ ಹೊಂದಿರುವನು,” ಎಂದನು.


ದೇವರು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು, ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಶಾಶ್ವತವಾದ ಸ್ವತ್ತನ್ನಾಗಿ ಕೊಡುತ್ತೇನೆ,’ ಎಂದು ಹೇಳಿದರು.


ಇದಕ್ಕೆ ಕಾರಣ ನಿನಗೆ ಸಹಾಯ ಮಾಡುವ ನಿನ್ನ ಪಿತೃಗಳ ದೇವರು; ನಿನ್ನನ್ನು ಸರ್ವಶಕ್ತರಾದ ದೇವರು ಆಶೀರ್ವದಿಸಲಿ. ಆ ಆಶೀರ್ವಾದಗಳು ಪರಲೋಕದವುಗಳು. ಆ ಆಶೀರ್ವಾದಗಳು ಕೆಳಗಿನಾಳದಲ್ಲಿರುವವುಗಳು. ಅವು ಎದೆಯ ಹಾಗೂ ಗರ್ಭದ ಆಶೀರ್ವಾದಗಳು.


ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು.


ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ, “ಯೆಹೋವ ದೇವರು ನಿಮ್ಮ ಸಂಗಡ ಇರಲಿ,” ಎಂದನು. ಅದಕ್ಕೆ ಅವರು, “ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು