Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:7 - ಕನ್ನಡ ಸಮಕಾಲಿಕ ಅನುವಾದ

7 ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ, ಪದ್ದನ್ ಅರಾಮಿಗೆ ಹೋದದ್ದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹಾಗೂ ಯಕೋಬನು ತನ್ನ ತಂದೆ ತಾಯಿಗಳು ಹೇಳಿದಂತೆ ಮೆಸಪೊಟೇಮಿಯಗೆ ಹೋದದ್ದು - ಇದೆಲ್ಲವನ್ನು ಇತ್ತ ಏಸಾವನು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕೋಬನು ತನ್ನ ತಂದೆತಾಯಿಗಳು ಹೇಳಿದಂತೆ ಪದ್ದನ್ಅರಾವಿುಗೆ ಹೋದದ್ದನ್ನೂ ಏಸಾವನು ನೋಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇದಲ್ಲದೆ ಯಾಕೋಬನು ತನ್ನ ತಂದೆತಾಯಿಗಳಿಗೆ ವಿಧೇಯನಾಗಿ ಪದ್ದನ್‌ಅರಾಮಿಗೆ ಹೋದದ್ದೂ ಏಸಾವನಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:7
11 ತಿಳಿವುಗಳ ಹೋಲಿಕೆ  

ಮಕ್ಕಳೇ, ಎಲ್ಲಾ ವಿಧಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಏಕೆಂದರೆ ಇದು ಕರ್ತ ಯೇಸುವಿಗೆ ಬಹು ಮೆಚ್ಚಿಕೆಯಾಗಿದೆ.


“ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ.”


ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು.


“ತನ್ನ ತಂದೆಯನ್ನು ಹಾಸ್ಯಮಾಡಿ, ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. ರಣಹದ್ದುಗಳು ಅದನ್ನು ತಿಂದುಬಿಡುವವು.


ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು, ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.


“ ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.


ಆದ್ದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು. ಎದ್ದು ಹಾರಾನಿನಲ್ಲಿರುವ ನನ್ನ ಸಹೋದರ ಲಾಬಾನನ ಬಳಿಗೆ ಓಡಿಹೋಗು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.


ಇಸಾಕನು ಯಾಕೋಬನನ್ನು ಆಶೀರ್ವದಿಸಿ, ಅವನಿಗೆ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ, ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ, ಅವನಿಗೆ, “ಕಾನಾನ್ಯರ ಪುತ್ರಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳಬಾರದು,” ಎಂದು ಆಜ್ಞಾಪಿಸಿದ್ದನ್ನೂ, ಏಸಾವನು ತಿಳಿದುಕೊಂಡನು.


ಕಾನಾನ್ಯರ ಪುತ್ರಿಯರು ತನ್ನ ತಂದೆ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ಏಸಾವನು ತಿಳಿದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು