Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:13 - ಕನ್ನಡ ಸಮಕಾಲಿಕ ಅನುವಾದ

13 ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಲಾಬಾನನು ತನ್ನ ಸೋದರಳಿಯ ಬಂದ ಸುದ್ದಿಯನ್ನು ಕೇಳಿ ಅವನನ್ನು ಎದುರುಗೊಳ್ಳಲು ಓಡಿಬಂದನು. ಯಕೋಬನನ್ನು ಅಪ್ಪಿಕೊಂಡು ಮುದ್ದಿಟ್ಟು, ಮನೆಗೆ ಕರೆದುಕೊಂಡು ಹೋದನು. ನಡೆದ ಸಂಗತಿಗಳನ್ನೆಲ್ಲ ಯಕೋಬನು ಲಾಬಾನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಲಾಬಾನನು ತನ್ನ ಸೋದರಳಿಯನು ಬಂದ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರಕೊಂಡು ಬಂದನು. ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:13
12 ತಿಳಿವುಗಳ ಹೋಲಿಕೆ  

ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿದನು.


ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಎಲ್ಲಾ ಸಭೆಗಳವರೂ ನಿಮಗೆ ವಂದನೆಗಳನ್ನು ಕಳುಹಿಸುತ್ತಾರೆ.


ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು.


ನೀನು ನನಗೆ ಮುದ್ದು ಕೊಡಲಿಲ್ಲ. ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವುದನ್ನು ಬಿಡಲಿಲ್ಲ.


ಜನರೆಲ್ಲರೂ ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ, ಬರ್ಜಿಲ್ಲೈಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಸ್ಥಳಕ್ಕೆ ಹಿಂದಿರುಗಿದನು.


ಮೋಶೆಗೆ ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ, ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.


ಇದಲ್ಲದೆ ಯೆಹೋವ ದೇವರು ಆರೋನನಿಗೆ, “ಮೋಶೆಯನ್ನು ಎದುರುಗೊಳ್ಳುವದಕ್ಕೆ ಮರುಭೂಮಿಗೆ ಹೋಗು,” ಎಂದರು. ಆಗ ಅವನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ಇದಲ್ಲದೆ ತನ್ನ ಸಹೋದರರಿಗೆಲ್ಲಾ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.


ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ.


ಲಾಬಾನನು ಅವನಿಗೆ, “ಯೆಹೋವ ದೇವರಿಂದ ಆಶೀರ್ವಾದ ಪಡೆದವನೇ, ಒಳಗೆ ಬಾ, ಏಕೆ ಹೊರಗೆ ನಿಂತಿರುವೆ? ನಾನು ಮನೆಯನ್ನೂ, ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ,” ಎಂದನು.


ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು, ಅವನನ್ನು ಅಪ್ಪಿಕೊಂಡು, ಅವನ ಕೊರಳಿನ ಮೇಲೆ ಬಿದ್ದು, ಅವನಿಗೆ ಮುದ್ದಿಟ್ಟನು. ಅವರಿಬ್ಬರೂ ಅತ್ತರು.


ಆಗ ಆ ಮನುಷ್ಯನು ಮನೆಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ, ಅವುಗಳಿಗೆ ಹುಲ್ಲನ್ನೂ, ಮೇವನ್ನೂ ಕೊಟ್ಟನು. ಅವನ ಕಾಲುಗಳನ್ನೂ, ಅವನ ಸಂಗಡ ಇದ್ದ ಮನುಷ್ಯರ ಕಾಲುಗಳನ್ನೂ ತೊಳೆಯುವುದಕ್ಕೆ ನೀರನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು