ಆದಿಕಾಂಡ 29:25 - ಕನ್ನಡ ಸಮಕಾಲಿಕ ಅನುವಾದ25 ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಯಾಕೋಬನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದೆ? ರಾಹೇಲಳಿಗೋಸ್ಕರ ನಾನು ನಿನಗೆ ಸೇವೆಮಾಡಿದೆನಲ್ಲಾ? ಏಕೆ ನನಗೆ ಮೋಸಮಾಡಿದೆ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆ ಹೆಣ್ಣು ಲೇಯಳೆಂದು ಯಕೋಬನಿಗೆ ಬೆಳಿಗ್ಗೆ ತಿಳಿಯಿತು. ಅವನು ಲಾಬಾನನಿಗೆ, “ನೀವು ನನಗೇಕೆ ಹೀಗೆ ಮಾಡಿದಿರಿ? ರಾಖೇಲಳಿಗಾಗಿ ಅಲ್ಲವೆ ನಾನು ನಿಮಗೆ ಸೇವೆಮಾಡಿದ್ದು? ನನಗೆ ಮೋಸಮಾಡಿದ್ದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಬೆಳಿಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮುಂಜಾನೆ ಯಾಕೋಬನು ಎದ್ದು ನೋಡಿದಾಗ ಅವನೊಂದಿಗೆ ಲೇಯಾ ಇದ್ದಳು. ಯಾಕೋಬನು ಲಾಬಾನನಿಗೆ, “ನೀನು ನನಗೆ ಮೋಸ ಮಾಡಿದೆ. ನಾನು ರಾಹೇಲಳನ್ನು ಮದುವೆ ಮಾಡಿಕೊಳ್ಳುವುದಕ್ಕಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡಿದೆ. ನೀನು ನನಗೇಕೆ ಮೋಸ ಮಾಡಿದೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.