ಆದಿಕಾಂಡ 29:27 - ಕನ್ನಡ ಸಮಕಾಲಿಕ ಅನುವಾದ27 ಹಿರಿಯಳೊಡನೆ ಈ ವಾರವನ್ನು ಪೂರೈಸು. ತರುವಾಯ ನೀನು ಇನ್ನು ಬೇರೆ ಏಳು ವರ್ಷಗಳವರೆಗೆ ಸೇವೆ ಮಾಡಲು ಒಪ್ಪಿಕೊಂಡರೆ, ನಾನು ಕಿರಿಯ ಮಗಳನ್ನು ನಿನಗೆ ಕೊಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹಿರಿಯಳೊಡನೆ ಮದುವೆಯ ವಾರವನ್ನು ಕಳೆದುಬಿಡು; ಅನಂತರ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ. ಅವಳಿಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡುವೆಯಂತೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಕೆಯ [ಮದುವೆಯ] ವಾರವನ್ನು ಪೂರೈಸು; ಅನಂತರ ಈ ನನ್ನ ಕಿರೀ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರುಷ ಸೇವೆಮಾಡು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದರೆ ಆಕೆಯ ಮದುವೆಯ ವಾರವನ್ನು ಮುಂದುವರಿಸು. ನಾನು ನಿನಗೆ ರಾಹೇಲಳನ್ನು ಸಹ ಮದುವೆ ಮಾಡಿಕೊಡುತ್ತೇನೆ. ಆದರೆ ನೀನು ನನಗೆ ಇನ್ನೂ ಏಳು ವರ್ಷ ಸೇವೆ ಮಾಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |