Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:30 - ಕನ್ನಡ ಸಮಕಾಲಿಕ ಅನುವಾದ

30 ಯಾಕೋಬನು ರಾಹೇಲಳೊಂದಿಗೆ ಕೂಡಿ, ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಸಿದನು. ಇನ್ನೂ ಏಳು ವರ್ಷ ಲಾಬಾನನ ಬಳಿಯಲ್ಲಿ ಸೇವೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಕೋಬನು ರಾಖೇಲಳನ್ನು ಕೂಡಿದನು. ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿ ಇನ್ನೂ ಏಳು ವರ್ಷ ಸೇವೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಕೋಬನು ರಾಹೇಲಳನ್ನೂ ಕೂಡಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳುವರುಷ ಸೇವೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯಾಕೋಬನು ರಾಹೇಲಳನ್ನೂ ಕೂಡಿದನು. ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿ ಆಕೆಗೋಸ್ಕರ ಇನ್ನೂ ಏಳು ವರ್ಷ ಸೇವೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:30
17 ತಿಳಿವುಗಳ ಹೋಲಿಕೆ  

ನಿನ್ನ ಇಬ್ಬರು ಪುತ್ರಿಯರಿಗಾಗಿ ಹದಿನಾಲ್ಕು ವರ್ಷ, ನಿನ್ನ ಮಂದೆಗಳಿಗೋಸ್ಕರ ಆರು ವರ್ಷ, ಈ ಪ್ರಕಾರ ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದು, ನಿನ್ನ ಸೇವೆ ಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


“ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು, ‘ನನ್ನ ಹೆಂಡತಿಯು ನನಗೆ ಇಬ್ಬರು ಪುತ್ರರನ್ನು ಹೆತ್ತಳೆಂಬುದು ನಿಮಗೆ ತಿಳಿದಿದೆ.


ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರ್ಷಗಳು ಅವನಿಗೆ ಸ್ವಲ್ಪದಿನಗಳಾಗಿ ತೋರಿದವು.


ಹೀಗಿರುವುದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಾನು ನಿನ್ನ ಕಿರಿ ಮಗಳಾಗಿರುವ ರಾಹೇಲಳಿಗೋಸ್ಕರ ನಿಮ್ಮಲ್ಲಿ ಏಳು ವರ್ಷ ಸೇವೆ ಮಾಡುತ್ತೇನೆ,” ಎಂದನು.


ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು.


ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು. ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ, ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.


ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದು, ಒಬ್ಬಳನ್ನು ಪ್ರೀತಿಸುತ್ತಲೂ, ಮತ್ತೊಬ್ಬಳನ್ನು ದ್ವೇಷಿಸುತ್ತಲೂ ಇದ್ದರೆ, ಅವರಿಬ್ಬರೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ, ಚೊಚ್ಚಲು ಮಗನು ತಿರಸ್ಕಾರ ಹೊಂದುತ್ತಿರುವ ಹೆಂಡತಿಯಲ್ಲಿಯೇ ಹುಟ್ಟಿದ್ದರೆ,


ನಾವು ನಮ್ಮ ಒಡೆಯನಿಗೆ, ‘ನಮಗೆ ಮುದುಕನಾದ ತಂದೆಯೂ ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಚಿಕ್ಕ ಮಗನೂ ಇದ್ದಾನೆ, ಅವನ ಸಹೋದರನು ಸತ್ತುಹೋಗಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿಸುತ್ತಾನೆ,’ ಎಂದು ಹೇಳಿದೆವು.


ಅವನು ನಮ್ಮನ್ನು ಹೊರಗಿನವರಂತೆ ಎಣಿಸಿದ್ದಾನಲ್ಲಾ. ಅವನು ನಮ್ಮನ್ನು ಮಾರಿ, ನಮ್ಮ ಹಣವನ್ನೂ ನುಂಗೇ ಬಿಟ್ಟನಲ್ಲಾ.


ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.


“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಲೇಯಳ ಕಣ್ಣುಗಳು ಕಾಂತಿಹೀನವಾಗಿದ್ದವು. ಆದರೆ ರಾಹೇಲಳು ಸುಂದರಿಯೂ ರೂಪವತಿಯೂ ಆಗಿದ್ದಳು.


ಲಾಬಾನನು ತನ್ನ ಮಗಳಾದ ರಾಹೇಲಳಿಗೆ, ತನ್ನ ದಾಸಿಯಾದ ಬಿಲ್ಹಳನ್ನು ದಾಸಿಯಾಗಿ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು