Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:31 - ಕನ್ನಡ ಸಮಕಾಲಿಕ ಅನುವಾದ

31 ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಲೇಯಳು ಯಾಕೋಬನಿಗೆ ಅಲಕ್ಷ್ಯವಾದಳೆಂದು ಯೆಹೋವನು ನೋಡಿ ಆಕೆಯನ್ನು ಬಸುರಾಗುವಂತೆ ಮಾಡಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸುವುದನ್ನು ಯೆಹೋವನು ನೋಡಿದನು. ಆದ್ದರಿಂದ ಯೆಹೋವನು ಲೇಯಳಿಗೆ ಮಕ್ಕಳಾಗುವಂತೆ ಮಾಡಿದನು. ಆದರೆ ರಾಹೇಲಳಿಗೆ ಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:31
26 ತಿಳಿವುಗಳ ಹೋಲಿಕೆ  

“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಹಾಗೆಯೇ ಯೆಹೋವ ದೇವರು ಹನ್ನಳಿಗೆ ಕೃಪೆ ತೋರಿಸಿದ್ದರಿಂದ, ಅವಳು ಗರ್ಭಧರಿಸಿ ಮೂವರು ಪುತ್ರರನ್ನೂ, ಇಬ್ಬರು ಪುತ್ರಿಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುಯೇಲನು ಯೆಹೋವ ದೇವರ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.


ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. ಗರ್ಭಫಲವು ದೇವರ ಬಹುಮಾನ.


ಅವನು ಹನ್ನಳನ್ನು ಪ್ರೀತಿಸಿದ್ದರಿಂದ ಹನ್ನಳಿಗೆ ಎರಡಷ್ಟು ಪಾಲನ್ನು ಕೊಡುತ್ತಿದ್ದನು. ಆದರೆ ಯೆಹೋವ ದೇವರು ಹನ್ನಳ ಗರ್ಭವನ್ನು ಮುಚ್ಚಿಬಿಟ್ಟಿದ್ದರು.


ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದು, ಒಬ್ಬಳನ್ನು ಪ್ರೀತಿಸುತ್ತಲೂ, ಮತ್ತೊಬ್ಬಳನ್ನು ದ್ವೇಷಿಸುತ್ತಲೂ ಇದ್ದರೆ, ಅವರಿಬ್ಬರೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ, ಚೊಚ್ಚಲು ಮಗನು ತಿರಸ್ಕಾರ ಹೊಂದುತ್ತಿರುವ ಹೆಂಡತಿಯಲ್ಲಿಯೇ ಹುಟ್ಟಿದ್ದರೆ,


ಏಕೆಂದರೆ ಯೆಹೋವ ದೇವರು ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರನ್ನು ಬಂಜೆಯರನ್ನಾಗಿ ಮಾಡಿದ್ದರು.


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಯಾಕೋಬನು ರಾಹೇಲಳೊಂದಿಗೆ ಕೂಡಿ, ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಸಿದನು. ಇನ್ನೂ ಏಳು ವರ್ಷ ಲಾಬಾನನ ಬಳಿಯಲ್ಲಿ ಸೇವೆ ಮಾಡಿದನು.


ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು.


“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.


ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ, ಇದಲ್ಲದೆ ಅವರಿಬ್ಬರೂ ಬಹಳ ವಯಸ್ಸಾದವರಾಗಿದ್ದರು.


ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿಕೊಂಡರು. ದೇವರು ಆಕೆಯ ಮೊರೆಯನ್ನು ಕೇಳಿ, ಆಕೆಗೆ ಮಕ್ಕಳಾಗುವಂತೆ ಅನುಗ್ರಹಮಾಡಿದರು.


ಏಸಾವನು ತನ್ನ ತಂದೆಯು ಅವನಿಗೆ ಕೊಟ್ಟ ಆಶೀರ್ವಾದಕ್ಕೋಸ್ಕರ ಯಾಕೋಬನನ್ನು ದ್ವೇಷಿಸಿದನು. ಏಸಾವನು, “ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸಮೀಪವಾಗಿವೆ. ತರುವಾಯ ನಾನು ನನ್ನ ಸಹೋದರ ಯಾಕೋಬನನ್ನು ಕೊಲ್ಲುವೆನು,” ಎಂದು ತನ್ನಲ್ಲಿಯೇ ಅಂದುಕೊಂಡನು.


ಆದರೆ ಆಕೆಯು ಬಂಜೆಯಾಗಿದ್ದುದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವ ದೇವರನ್ನು ಬೇಡಿಕೊಂಡನು. ಯೆಹೋವ ದೇವರು ಅವನ ಬೇಡಿಕೆಯನ್ನು ಪೂರೈಸಿದರು. ಆದ್ದರಿಂದ ಅವನ ಹೆಂಡತಿ ರೆಬೆಕ್ಕಳು ಗರ್ಭಿಣಿಯಾದಳು.


ಏಸಾವನನ್ನು ದ್ವೇಷ ಮಾಡಿದೆನು. ಅವನ ಬೆಟ್ಟಗಳನ್ನು ಹಾಳು ಮಾಡಿ, ಅವನ ಸೊತ್ತನ್ನು ಅಡವಿಯ ನರಿಗಳಿಗೆ ಕೊಟ್ಟೆನು.”


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ನಾನು ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದನ್ನು ಅವರು ನನಗೆ ಕೊಟ್ಟರು.


ಹನ್ನಳು ಗರ್ಭವತಿಯಾಗಿ, ಕಾಲವು ಪೂರ್ತಿಯಾದ ತರುವಾಯ ಮಗನನ್ನು ಹೆತ್ತು, “ನಾನು ಇವನಿಗಾಗಿ ಯೆಹೋವ ದೇವರನ್ನು ಬೇಡಿ ಪಡೆದುಕೊಂಡೆನು,” ಎಂದು ಹೇಳಿ ಅವನಿಗೆ, ಸಮುಯೇಲ ಎಂದು ಹೆಸರಿಟ್ಟಳು.


ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಹಾಗರಳೆಂಬ ಈಜಿಪ್ಟಿನ ದಾಸಿ ಇದ್ದಳು.


ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.


ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.


ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ಬೋವಜನು ರೂತಳನ್ನು ಮದುವೆಯಾದನು. ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳೊಂದಿಗೆ ಬಾಳಿದಾಗ, ರೂತಳು ಯೆಹೋವ ದೇವರ ಅನುಗ್ರಹದಿಂದ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.


ಸಾರಯಳು ಬಂಜೆಯಾದದ್ದರಿಂದ ಆಕೆಗೆ ಮಕ್ಕಳಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು