Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:35 - ಕನ್ನಡ ಸಮಕಾಲಿಕ ಅನುವಾದ

35 ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ಈಗ ನಾನು ಯೆಹೋವ ದೇವರನ್ನು ಸ್ತುತಿಸುವೆನು,” ಎಂದು ಹೇಳಿ, ಅವನಿಗೆ ಯೆಹೂದ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಮಕ್ಕಳಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮಗದೊಮ್ಮೆ ಗರ್ಭಧರಿಸಿ ಈ ಸಾರಿಯೂ ಗಂಡು ಮಗುವನ್ನೇ ಹೆತ್ತಳು. "ಈಗ ಸರ್ವೇಶ್ವರಸ್ವಾಮಿಯ ಸ್ತುತಿಮಾಡುತ್ತೇನೆ,“ ಎಂದು ಹೇಳಿ ಆ ಮಗುವಿಗೆ “ಯೆಹೂದ" ಎಂದು ನಾಮಕರಣ ಮಾಡಿದಳು. ಆ ಮೇಲೆ ಆಕೆಗೆ ಗರ್ಭಧಾರಣೆ ಆಗುವುದು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆಕೆಯು ತಿರಿಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು - ಈಗ ಯೆಹೋವನಿಗೆ ಉಪಕಾರಸ್ತುತಿ ಮಾಡುವೆನು ಎಂದು ಹೇಳಿ ಅದಕ್ಕೆ ಯೆಹೂದಾ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಗರ್ಭಧಾರಣೆಯಾಗುವದು ತಡವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಂತರ ಲೇಯಾ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಲೇಯಳು ತನ್ನೊಳಗೆ, “ಈಗ ನಾನು ಯೆಹೋವನನ್ನು ಸ್ತುತಿಸುವೆನು” ಎಂದು ಹೇಳಿ ಆ ಮಗುವಿಗೆ ಯೆಹೂದ ಎಂದು ಹೆಸರಿಟ್ಟಳು. ನಂತರ ಲೇಯಳಿಗೆ ಮಕ್ಕಳಾಗುವುದು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:35
13 ತಿಳಿವುಗಳ ಹೋಲಿಕೆ  

ಅಬ್ರಹಾಮನು ಇಸಾಕನ ತಂದೆ, ಇಸಾಕನು ಯಾಕೋಬನ ತಂದೆ, ಯಾಕೋಬನು ಯೂದ ಮತ್ತು ಅವನ ಅಣ್ಣ ತಮ್ಮಂದಿರ ತಂದೆ,


ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.


ಯೆಹೂದನ ಬಗ್ಗೆ ಮೋಶೆ ಹೇಳಿದ ಮಾತಿದು: “ಯೆಹೋವ ದೇವರೇ, ಯೆಹೂದನ ಮೊರೆಯನ್ನಾಲಿಸಿ, ಅವರನ್ನು ಅವರ ಬಂಧುಗಳೊಡನೆ ಸೇರಿಸಿರಿ. ಅವನ ಸ್ವಂತ ಕೈಗಳೇ ತನ್ನ ಹಕ್ಕು ಬಾಧ್ಯತೆಗಳನ್ನು ಕಾದಿರಿಸುತ್ತವೆ. ಅವನ ಶತ್ರುಗಳಿಂದ ಅವನನ್ನು ತಪ್ಪಿಸಿರಿ.”


ಲೇಯಳ ದಾಸಿ ಜಿಲ್ಪಳ ಪುತ್ರರು: ಗಾದ್ ಮತ್ತು ಆಶೇರ್. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.


ಯೆಹೂದ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.


“ಈ ಜನರ ಹೆಸರುಗಳು ಇವೇ. “ಯೆಹೂದನ ಕುಟುಂಬದಿಂದ ಯೆಫುನ್ನೆಯ ಮಗ ಕಾಲೇಬನೂ,


ಲೇಯಳು ತಾನು ಹೆರುವುದು ನಿಂತಿತೆಂದು ತಿಳಿದು, ತನ್ನ ದಾಸಿ ಜಿಲ್ಪಳನ್ನು ಯಾಕೋಬನಿಗೆ ಹೆಂಡತಿಯಾಗಿ ಕೊಟ್ಟಳು.


ರೂಬೇನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ, ಪಶ್ಚಿಮದ ಕಡೆಯವರೆಗೂ ಯೆಹೂದಕ್ಕೆ ಒಂದು ಭಾಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು