Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಸೃಷ್ಟಿಸಿದ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವದೇವರು ಉಂಟುಮಾಡಿದ ಎಲ್ಲಾ ಭೂಜಂತುಗಳಲ್ಲಿ ಸರ್ಪವು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಯ ಬಳಿಗೆ ಬಂದು - ಏನವ್ವಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಬಾರದೆಂದು ದೇವರು ಅಪ್ಪಣೆಕೊಟ್ಟಿರುವದು ನಿಜವೋ ಎಂದು ಕೇಳಲು ಸ್ತ್ರೀಯು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರಾದ ಯೆಹೋವನು ಸೃಷ್ಟಿಸಿದ ಎಲ್ಲ ಭೂಜಂತುಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯನ್ನು ಮೋಸಗೊಳಿಸಲು ಅವಳ ಬಳಿಗೆ ಬಂದು, “ಏನಮ್ಮಾ, ಈ ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:1
14 ತಿಳಿವುಗಳ ಹೋಲಿಕೆ  

ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಇದರಲ್ಲಿ ಆಶ್ಚರ್ಯವೇನೂ ಇಲ್ಲ, ಸೈತಾನನೂ ಬೆಳಕಿನ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.


ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


“ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ ‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.


ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.


ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ ಅವನ ಗತಿ ದುರ್ಗತಿಯೇ ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.


“ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವೆಲ್ಲವನ್ನು ನಿನಗೆ ಕೊಡುವೆನು,” ಎಂದನು.


ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.


ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು