Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:16 - ಕನ್ನಡ ಸಮಕಾಲಿಕ ಅನುವಾದ

16 ಬಳಿಕ ದೇವರು ಸ್ತ್ರೀಗೆ ಹೀಗೆ ಹೇಳಿದರು, “ನಾನು ನಿನ್ನ ಗರ್ಭ ವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು. ನೀನು ನೋವಿನಿಂದ ಮಕ್ಕಳನ್ನು ಹೆರುವಿ. ನಿನ್ನ ಗಂಡನ ಮೇಲೆ ನಿನ್ನ ಬಯಕೆ ಇರುವುದು. ಅವನು ನಿನ್ನನ್ನು ಆಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಮೇಲೆ ಸ್ತ್ರೀಗೆ - ನೀನು ಗರ್ಭಿಣಿಯಾಗಿರುವ ಕಾಲದಲ್ಲಿ ಬಹು ಸಂಕಟಪಡಬೇಕೆಂದು ನಾನು ನೇವಿುಸಿದ್ದೇನೆ; ಕಷ್ಟದಿಂದಲೇ ಮಕ್ಕಳನ್ನು ಹೆರುವಿ; ಗಂಡನ ಮೇಲೆ ನಿನಗೆ ಆಶೆಯಿರುವದು; ಅವನು ನಿನಗೆ ಒಡೆಯನಾಗುವನು. ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:16
30 ತಿಳಿವುಗಳ ಹೋಲಿಕೆ  

ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ.


ಹೆಂಡತಿಯರೇ, ನೀವು ಕರ್ತ ಯೇಸುವಿನಲ್ಲಿ ಯೋಗ್ಯರಾಗಿರುವಂತೆ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ಪ್ರತಿ ಪುರುಷನಿಗೂ ಕ್ರಿಸ್ತನು ಶಿರಸ್ಸು, ಸ್ತ್ರೀಗೆ ಪುರುಷನು ಶಿರಸ್ಸು ಮತ್ತು ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾರೆ, ಎಂಬುದನ್ನು ನೀವು ತಿಳಿಯಬೇಕೆಂಬುದು ನನ್ನ ಅಪೇಕ್ಷೆ.


ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆ, ಪ್ರೀತಿ ಹಾಗೂ ಪರಿಶುದ್ಧತೆಯಲ್ಲಿ ನೆಲೆಗೊಂಡಿದ್ದರೆ ಅವರು ಮಗುವನ್ನು ಹೆರುವುದರ ಮೂಲಕ ರಕ್ಷಣೆಹೊಂದುವರು.


ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಲಿ. ಏಕೆಂದರೆ ಮಾತನಾಡಲು ಅವರಿಗೆ ಅನುಮತಿಯಿಲ್ಲ, ನಿಯಮವು ಸಹ ಹೇಳಿರುವಂತೆ ಅವರು ಅಧೀನರಾಗಿರಬೇಕು.


ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ.


ಒಬ್ಬ ಸ್ತ್ರೀಗೆ ಪ್ರಸವ ಗಳಿಗೆ ಬಂದಾಗ ದುಃಖವಿರುವುದು. ಆದರೆ ಆಕೆಯು ಮಗುವನ್ನು ಹೆತ್ತಾಗ ಈ ಲೋಕದೊಳಗೆ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಆಕೆಯು ಇನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.


ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.


ಅದರ ಕೀರ್ತಿಯನ್ನು ಕೇಳಿದ್ದೇವೆ; ನಮ್ಮ ಕೈಗಳು ಜೋಲಾಡುತ್ತವೆ, ಸಂಕಟವೂ, ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.


ಸಮಸ್ತ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಸಮಸ್ತ ಹರಕೆಗಳನ್ನೂ, ಅವಳ ಗಂಡನು ಅದನ್ನು ಸ್ಥಾಪಿಸಬಹುದು ಅಥವಾ ಅದನ್ನು ರದ್ದುಗೊಳಿಸಬಹುದು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲ ಗೊತ್ತಾದಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರವರೆಗೂ ತಮ್ಮ ಗಂಡಂದಿರಿಗೆ ಗೌರವಕೊಡುವರು,” ಎಂದು ಸಲಹೆ ನೀಡಿದನು.


ಓ, ‘ಲೆಬನೋನಿನಲ್ಲಿ’ ವಾಸಮಾಡುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡವಳೇ, ನಿನ್ನ ಮೇಲೆ ಬೇನೆಗಳೂ, ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ದುಃಖಕರವಾಗಿರುವೆ.


ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು ಯೆಹೋವ ದೇವರು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳೋ ಎಂಬಂತೆ ಹಿಡಿಯುವುದಲ್ಲವೆ?


ಆದ್ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ. ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ. ಕಣ್ಣು ಕುರುಡಾಗುವಷ್ಟು ಭ್ರಾಂತನಾಗಿದ್ದೇನೆ.


ಅವರು ಭಯಪಡುವರು. ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವುವು. ಪ್ರಸವವೇದನೆಯಲ್ಲಿರುವ ಸ್ತ್ರೀಯರಂತೆ ಸಂಕಟಪಡುವರು. ಅವರು ಒಬ್ಬರಿಗೊಬ್ಬರು ಭ್ರಮೆ ಪಡುವರು. ಅವರ ಮುಖಗಳು ಜ್ವಾಲೆಯಂತಿರುವುವು.


ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ.


ಏಕೆಂದರೆ ಪ್ರಸವವೇದನೆ ಪಡುವವಳಂತೆ, ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, “ಅಯ್ಯೋ, ನನಗೀಗ ಕಷ್ಟ! ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” ಎಂದು ಅರಚಿಕೊಳ್ಳುತ್ತಾಳೆ.


ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.


ಅಲ್ಲಿ ನಡುಕವವೂ ಹೆರುವವಳ ಹಾಗೆ ನೋವೂ ಅವರನ್ನು ಹಿಡಿಯಿತು.


ಏಕೆಂದರೆ ಮೊದಲು ನಿರ್ಮಿತನಾದವನು ಆದಾಮನು, ಆಮೇಲೆ ಹವ್ವಳು.


ಯಾಬೇಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ, “ನಾನು ಇವನನ್ನು ವ್ಯಥೆಯಿಂದ ಹೆತ್ತೆನು,” ಎಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು