Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:21 - ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರನಾದ ದೇವರು ಆದಾಮನಿಗೂ ಆತನ ಹೆಂಡತಿಗೂ ಚರ್ಮದ ಅಂಗಿಗಳನ್ನು ತೊಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರಾದ ಯೆಹೋವನು ಪ್ರಾಣಿಯ ಚರ್ಮದಿಂದ ಉಡುಪುಗಳನ್ನು ಮಾಡಿ ಆದಾಮನಿಗೆ ಮತ್ತು ಅವನ ಹೆಂಡತಿಗೆ ತೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:21
8 ತಿಳಿವುಗಳ ಹೋಲಿಕೆ  

ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಆಗ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು, ಅವರು ಅಂಜೂರದ ಎಲೆಗಳನ್ನು ತೆಗೆದುಕೊಂಡು ತಮಗೆ ತಾವೇ ಉಡುಪುಗಳನ್ನು ಮಾಡಿಕೊಂಡರು.


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಏಕೆಂದರೆ ಆಕೆಯೇ ಬದುಕಿದವರಿಗೆಲ್ಲಾ ತಾಯಿಯಾಗಿದ್ದಾಳೆ.


ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.


ಕಡಿಮೆ ಗೌರವವುಳ್ಳವುಗಳೆಂದು ಯೋಚಿಸುವವುಗಳನ್ನು ವಿಶೇಷ ಗೌರವದಿಂದ ನೋಡುತ್ತೇವೆ. ಬಹಿರಂಗಪಡಿಸದ ಅಂಗಗಳನ್ನು ವಿಶೇಷ ಮರ್ಯಾದೆಯಿಂದ ಸಂರಕ್ಷಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು