ಆದಿಕಾಂಡ 30:1 - ಕನ್ನಡ ಸಮಕಾಲಿಕ ಅನುವಾದ1 ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರಲಿಲ್ಲ ಎಂದು ತಿಳಿದಾಗ, ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೆಕಿಚ್ಚು ಪಟ್ಟು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ರಾಖೇಲಳು ತಾನು ಯಕೋಬನಿಗೆ ಮಕ್ಕಳನ್ನು ಹೆರಲಿಲ್ಲವೆಂದುಕೊಂಡು ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚು ಪಟ್ಟಳು. ಅಲ್ಲದೆ ಯಕೋಬನಿಗೆ, “ನನಗೆ ಮಕ್ಕಳನ್ನು ಕೊಡು; ಇಲ್ಲದಿದ್ದರೆ ಸಾಯುತ್ತೇನೆ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ರಾಹೇಲಳು ತಾನು ಮಕ್ಕಳನ್ನು ಹೆರದೆ ಇರುವದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು ಯಾಕೋಬನಿಗೆ - ಮಕ್ಕಳನ್ನು ನನಗೆ ಕೊಡು; ಇಲ್ಲದಿದ್ದರೆ ಸಾಯುವೆನು ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕ ಲೇಯಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |