Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:15 - ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಆಕೆಯು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯ ಫಲಗಳನ್ನು ಸಹ ತೆಗೆದುಕೊಳ್ಳುವಿಯೋ?” ಎಂದಳು. ಅದಕ್ಕೆ ರಾಹೇಲಳು, “ನಿನ್ನ ಮಗನು ತಂದ ದುದಾಯ ಫಲಗಳಿಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ಅಪಹರಿಸಿದ್ದು ಸಾಲದೆಂದು ನನ್ನ ಮಗ ತಂದ ಕಾಮೋದ್ದೀಪಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದಿರುವೆಯಾ?” ಎಂದು ಬದಲಿತ್ತಳು. ಆಗ ರಾಖೇಲಳು, “ಸರಿ, ನೀನು ನಿನ್ನ ಮಗನು ತಂದ ಕಾಮೋದ್ದೀಪಕ ಹಣ್ಣುಗಳನ್ನು ನನಗೆ ಕೊಟ್ಟೆಯಾದರೆ ಇಂದಿನ ರಾತ್ರಿ ಅವರು ನಿನ್ನೊಡನೆ ಮಲಗಬಹುದು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಲೇಯಳು - ನೀನು ನನ್ನ ಗಂಡನನ್ನು ಅಪಹರಿಸಿದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಫಲಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ ಎಂದು ಹೇಳಲು ರಾಹೇಲಳು - ಒಳ್ಳೇದು, ನೀನು ನಿನ್ನ ಮಗನ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು. ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:15
7 ತಿಳಿವುಗಳ ಹೋಲಿಕೆ  

ನೀನು ಮರುಭೂಮಿಯಲ್ಲಿ ನಮ್ಮನ್ನು ಸಾಯಿಸುವುದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಹೊರಕ್ಕೆ ಕರೆದುಕೊಂಡು ಬಂದದ್ದು ನಿನಗೆ ಸಾಕಾಗಲಿಲ್ಲವೋ? ನೀನು ಅರಸನಾಗಿ ನಮ್ಮನ್ನು ಆಳಬೇಕೋ?


ನನಗಾದರೋ ನಿಮ್ಮಿಂದಾಗಲಿ, ಮನುಷ್ಯರ ನ್ಯಾಯಾಲಯದಿಂದಾಗಲಿ ವಿಚಾರಣೆಯಾಗುವುದು ಅತ್ಯಲ್ಪ ಕಾರ್ಯವಾಗಿದೆ. ನನ್ನನ್ನು ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ.


ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ. ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ. ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.


ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ರೂಬೇನನು ಗೋಧಿ ಕೊಯ್ಯುವ ಕಾಲದಲ್ಲಿ ಹೋಗಿ, ಹೊಲದಲ್ಲಿ ದುದಾಯಿ ಫಲಗಳನ್ನು ಕಂಡು, ತಾಯಿ ಲೇಯಳ ಬಳಿಗೆ ಕೆಲವು ಫಲಗಳನ್ನು ತಂದಾಗ, ರಾಹೇಲಳು ಲೇಯಳಿಗೆ, “ನಿನ್ನ ಮಗನು ತಂದ ಫಲಗಳಲ್ಲಿ ಕೆಲವನ್ನು ನನಗೆ ಕೊಡು,” ಎಂದಳು.


ಯಾಕೋಬನು ಸಾಯಂಕಾಲದಲ್ಲಿ ಹೊಲದಿಂದ ಬಂದಾಗ, ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನ ಬಳಿಗೆ ಬರಬೇಕು. ನನ್ನ ಮಗನು ತಂದ ದುದಾಯಿ ಫಲಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ,” ಎಂದಳು. ಆದ್ದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು