Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:33 - ಕನ್ನಡ ಸಮಕಾಲಿಕ ಅನುವಾದ

33 ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ, ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿಕೊಡುವುದು. ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳು ನನ್ನ ಬಳಿಯಲ್ಲಿದ್ದರೆ, ಅವು ಕದ್ದವುಗಳು ಎಂದು ಎಣಿಕೆಯಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆಗಳಿಲ್ಲದ್ದು, ಕುರಿಗಳಲ್ಲಿ ಕಪ್ಪಿಲ್ಲದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇನ್ನು ಮೇಲೆ ನೀವು ಬಂದು ನನ್ನವುಗಳನ್ನು ಪರೀಕ್ಷಿಸುವಾಗ ನಾನು ಪ್ರಮಾಣಿಕನೋ ಇಲ್ಲವೋ ಎಂಬುದು ಪ್ರತ್ಯಕ್ಷವಾಗುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆ ಇಲ್ಲದ್ದೂ ಕುರಿಗಳಲ್ಲಿ ಕಪ್ಪಲ್ಲದ್ದೂ ನನ್ನವುಗಳಲ್ಲಿ ಸಿಕ್ಕಿದರೆ, ಅದನ್ನು ಕದ್ದು ತಂದದ್ದೆಂದು ಎಣಿಸಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನೀನು ಇನ್ನು ಮೇಲೆ ಬಂದು ನಾನು ಪಡೆದದ್ದನ್ನು ಪರೀಕ್ಷಿಸುವಾಗ ನಾನು ಪ್ರಾಮಾಣಿಕನೋ ಅಪ್ರಾಮಾಣಿಕನೋ ಎಂಬದು ಪ್ರತ್ಯಕ್ಷವಾಗುವದು. ಆಡುಗಳಲ್ಲಿ ಚುಕ್ಕೆ ಮಚ್ಚೆಯಿಲ್ಲದ್ದೂ ಕುರಿಗಳಲ್ಲಿ ಕಪ್ಪಲ್ಲದ್ದೂ ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಮುಂದಿನ ದಿನಗಳಲ್ಲಿ ನೀನು ಬಂದು ಪರೀಕ್ಷಿಸಿದಾಗ ನಾನು ಯಥಾರ್ಥನೊ ಇಲ್ಲವೊ ಎಂಬುದನ್ನು ನೀನು ಸುಲಭವಾಗಿ ಕಂಡುಕೊಳ್ಳಬಹುದು. ನಾನೇನಾದರೂ ಚುಕ್ಕೆಯಿಲ್ಲದ ಮೇಕೆಗಳನ್ನಾಗಲಿ ಅಥವಾ ಕಪ್ಪಿಲ್ಲದ ಕುರಿಗಳನ್ನಾಗಲಿ ಹೊಂದಿದ್ದರೆ, ನಾನು ಅದನ್ನು ಕದ್ದುಕೊಂಡದ್ದೆಂದು ನೀನು ಪರಿಗಣಿಸಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:33
8 ತಿಳಿವುಗಳ ಹೋಲಿಕೆ  

ಏಕೆಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ. ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. ನಮ್ಮ ದ್ರೋಹಗಳು ನಮ್ಮ ಸಂಗಡ ಇವೆ. ನಮ್ಮ ಅಕ್ರಮಗಳನ್ನು ನಾವೇ ಬಲ್ಲೆವು.


ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು, ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.


“ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.


ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು.


“ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.


ನೀನು ನನ್ನ ಸಲಕರಣೆಗಳನ್ನೆಲ್ಲಾ ಹುಡುಕಿದ ಮೇಲೆ ನಿನ್ನ ಮನೆಯ ಯಾವ ವಸ್ತುಗಳನ್ನು ಕಂಡುಕೊಂಡೆ? ನನಗೂ, ನಿನಗೂ ಬಂಧುಗಳಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.


ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದು ಹೋಗುವೆನು. ಕುರಿಗಳಲ್ಲಿ ಕಂದುಬಣ್ಣದವುಗಳನ್ನೆಲ್ಲಾ, ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.


ಲಾಬಾನನು, “ನೀನು ಹೇಳಿದಂತೆಯೇ ಆಗಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು