Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:5 - ಕನ್ನಡ ಸಮಕಾಲಿಕ ಅನುವಾದ

5 ಬಿಲ್ಹಳು ಗರ್ಭಿಣಿಯಾಗಿ, ಯಾಕೋಬನಿಗೆ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾಕೋಬನು ಅವಳನ್ನು ಸಂಗಮಿಸಲು ಬಿಲ್ಹಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಬಿಲ್ಹಾಳನ್ನು ಕೂಡಲು ಅವಳು ಗರ್ಭಿಣಿಯಾಗಿ ಒಂದು ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಅವಳನ್ನು ಕೂಡಲು ಬಿಲ್ಹಳು ಗರ್ಭಿಣಿಯಾಗಿ ಗಂಡುಮಗುವನ್ನು ಹೆರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಿಲ್ಹಾ ಬಸುರಾಗಿ ಯಾಕೋಬನಿಗೆ ಒಬ್ಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:5
11 ತಿಳಿವುಗಳ ಹೋಲಿಕೆ  

ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.


ಹೀಗೆ ಅವನಿಗೆ ತನ್ನ ದಾಸಿ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳನ್ನು ಸ್ವೀಕರಿಸಿದನು.


ರಾಹೇಲಳು, “ದೇವರು ನನಗೆ ನ್ಯಾಯತೀರಿಸಿ, ನನ್ನ ಸ್ವರವನ್ನು ಕೇಳಿ, ನನಗೆ ಮಗನನ್ನು ಕೊಟ್ಟಿದ್ದಾರೆ,” ಎಂದು ಹೇಳಿದಳು. ಆದ್ದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.


ರಾಹೇಲಳ ದಾಸಿ ಬಿಲ್ಹಳ ಪುತ್ರರು: ದಾನ್, ನಫ್ತಾಲಿ.


ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಪುತ್ರರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲರೂ ಕೂಡಿ ಏಳುಮಂದಿ.


ಅದಕ್ಕೆ ಯಾಕೋಬನು ಅವನಿಗೆ, “ನಾನು ನಿನಗೆ ಮಾಡಿದ ಸೇವೆಯನ್ನೂ, ನಿನ್ನ ಪಶುಗಳು ನನ್ನ ಬಳಿಯಲ್ಲಿ ಹೇಗೆ ಅಭಿವೃದ್ಧಿ ಆಗಿವೆ ಎಂಬುದನ್ನೂ ನೀನು ಬಲ್ಲೆ.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.


“ನಿಮಗೆ ಸಹಾಯ ಮಾಡಬೇಕಾದ ಪುರುಷರ ಹೆಸರುಗಳು: “ರೂಬೇನ್ ಗೋತ್ರದಿಂದ ಶೆದೇಯೂರನ ಮಗ ಎಲೀಚೂರ್,


ದಾನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.


ಇಸ್ರಾಯೇಲನ ಪುತ್ರರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,


ಅಬ್ರಹಾಮನು ಇಸಾಕನ ತಂದೆ, ಇಸಾಕನು ಯಾಕೋಬನ ತಂದೆ, ಯಾಕೋಬನು ಯೂದ ಮತ್ತು ಅವನ ಅಣ್ಣ ತಮ್ಮಂದಿರ ತಂದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು