ಆದಿಕಾಂಡ 30:6 - ಕನ್ನಡ ಸಮಕಾಲಿಕ ಅನುವಾದ6 ರಾಹೇಲಳು, “ದೇವರು ನನಗೆ ನ್ಯಾಯತೀರಿಸಿ, ನನ್ನ ಸ್ವರವನ್ನು ಕೇಳಿ, ನನಗೆ ಮಗನನ್ನು ಕೊಟ್ಟಿದ್ದಾರೆ,” ಎಂದು ಹೇಳಿದಳು. ಆದ್ದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ರಾಹೇಲಳು, “ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿ ಅದಕ್ಕೆ “ದಾನ್” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ರಾಖೇಲಳು, “ದೇವರು ನನಗೆ ನ್ಯಾಯ ದೊರಕಿಸಿದ್ದಾರೆ, ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾರೆ,” ಎಂದು ಹೇಳಿ ಆ ಮಗುವಿಗೆ ‘ದಾನ್’ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ರಾಹೇಲಳು - ದೇವರು ನನ್ನ ಕಡೆಗೆ ನ್ಯಾಯ ತೀರಿಸಿದ್ದಾನೆ; ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ ಎಂದು ಹೇಳಿ ಅದಕ್ಕೆ ದಾನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರಾಹೇಲಳು, “ದೇವರು ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಒಬ್ಬ ಮಗನನ್ನು ಕೊಡಲು ನಿರ್ಧರಿಸಿದನು” ಎಂದು ಹೇಳಿ ಆ ಮಗುವಿಗೆ ದಾನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |