Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:8 - ಕನ್ನಡ ಸಮಕಾಲಿಕ ಅನುವಾದ

8 ಆಗ ರಾಹೇಲಳು, “ಅಧಿಕವಾದ ಹೋರಾಟಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ,” ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ರಾಖೇಲಳು, “ನನ್ನ ಅಕ್ಕನ ಸಂಗಡ ಬಹಳವಾಗಿ ಹೋರಾಡಿ ಗೆದ್ದಿದ್ದೇನೆ,” ಎಂದು ಹೇಳಿ ಆ ಮಗುವನ್ನು ‘ನಫ್ತಾಲಿ’ ಎಂದು ಹೆಸರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಾಹೇಲಳು - ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಗೆದ್ದಿದ್ದೇನೆ ಎಂದು ಹೇಳಿ ಅದಕ್ಕೆ ನಫ್ತಾಲಿ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಹೇಲಳು, “ನನ್ನ ಅಕ್ಕನೊಂದಿಗೆ ಕಷ್ಟಪಟ್ಟು ಹೋರಾಡಿ ಗೆದ್ದಿದ್ದೇನೆ” ಎಂದು ಹೇಳಿ ಆ ಮಗುವಿಗೆ ನಫ್ತಾಲಿ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:8
12 ತಿಳಿವುಗಳ ಹೋಲಿಕೆ  

ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.


“ನಫ್ತಾಲಿ ಬಿಡುಗಡೆ ಹೊಂದಿದ ಜಿಂಕೆ, ಅವನು ಮಾತುಗಳು ಸುಂದರ ಮಕ್ಕಳ ಮಾತುಗಳಂತೆ.


ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.


ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ್ದೇನೆಂದರೆ: “ನಫ್ತಾಲಿಯೇ, ಯೆಹೋವ ದೇವರ ಅನುಗ್ರಹದಿಂದ ತೃಪ್ತನಾದವನೇ, ದೇವರ ಆಶೀರ್ವಾದದಿಂದ ತುಂಬಿದವನೇ; ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸೊತ್ತಾಗಲಿ.”


ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.


ನಫ್ತಾಲಿಯ ಪುತ್ರರು: ಯಹಚೇಲ, ಗೂನೀ, ಯೇಚೆರ್, ಶಿಲ್ಲೇಮ್ ಎಂಬುವರು.


ರಾಹೇಲಳ ದಾಸಿ ಬಿಲ್ಹಳ ಪುತ್ರರು: ದಾನ್, ನಫ್ತಾಲಿ.


“ಒಡೆಯಾ, ನಮ್ಮ ಮಾತನ್ನು ಕೇಳು, ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ. ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಳಿಡು. ನಮ್ಮಲ್ಲಿ ಯಾರೂ ನಿನಗೆ ಸಮಾಧಿಯನ್ನು ಕೊಡುವುದಿಲ್ಲ ಎಂದು ಹೇಳಲಾರರು,” ಎಂದರು.


ರಾಹೇಲಳ ದಾಸಿ ಬಿಲ್ಹಳು ಮತ್ತೆ ಗರ್ಭಿಣಿಯಾಗಿ, ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.


ಲೇಯಳು ತಾನು ಹೆರುವುದು ನಿಂತಿತೆಂದು ತಿಳಿದು, ತನ್ನ ದಾಸಿ ಜಿಲ್ಪಳನ್ನು ಯಾಕೋಬನಿಗೆ ಹೆಂಡತಿಯಾಗಿ ಕೊಟ್ಟಳು.


ತರುವಾಯ ನಫ್ತಾಲಿ ಗೋತ್ರದವರು. ನಫ್ತಾಲಿ ಮಕ್ಕಳಿಗೆ ಏನಾನನ ಮಗ ಅಹೀರನು ಸೈನ್ಯಾಧಿಪತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು