ಆದಿಕಾಂಡ 31:27 - ಕನ್ನಡ ಸಮಕಾಲಿಕ ಅನುವಾದ27 ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಹೋದೆ? ಏಕೆ ಮೋಸಮಾಡಿದೆ? ನನಗೆ ತಿಳಿಸಿದ್ದರೆ ಸಂತೋಷದಿಂದ ಹಾಡು, ತಾಳ, ವೀಣೆಗಳ ಸಂಗೀತದೊಂದಿಗೆ ನಿನ್ನನ್ನು ಕಳುಹಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನನಗೆ ಏನೂ ಹೇಳದೆ ವಂಚಿಸಿ ಏಕೆ ಓಡಿಬಂದೆ? ನನಗೆ ತಿಳಿಸಿದ್ದರೆ ಸಂಗೀತ ಸಂಭ್ರಮದೊಂದಿಗೆ, ತಾಳಮೇಳ ವಾದ್ಯಗಳೊಂದಿಗೆ ನಿನ್ನನ್ನು ಸಾಗಕಳುಹಿಸುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಬಂದಿ? ನನಗೆ ತಿಳಿಸಿದ್ದರೆ ನಾನು ಸಂಗೀತಮಾಡಿಸಿ ಮದ್ದಳೆ, ವೀಣೆ ಮುಂತಾದ ವಾದ್ಯಗಳೊಡನೆ ಸಂತೋಷದಿಂದ ನಿನ್ನನ್ನು ಸಾಗಕಳುಹಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೀನು ನನಗೆ ಹೇಳದೆ ಓಡಿಬಂದದ್ದೇಕೆ? ನೀನು ನನ್ನನ್ನು ಕೇಳಿದ್ದರೆ ನಾನು ನಿನಗಾಗಿ ಒಂದು ಔತಣಕೂಟವನ್ನೇರ್ಪಡಿಸುತ್ತಿದ್ದೆ. ಅಲ್ಲಿ ಗಾಯನ, ನೃತ್ಯ ಮತ್ತು ವಾದ್ಯಗೋಷ್ಠಿಗಳಿರುತ್ತಿದ್ದವು. ಅಧ್ಯಾಯವನ್ನು ನೋಡಿ |