Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:29 - ಕನ್ನಡ ಸಮಕಾಲಿಕ ಅನುವಾದ

29 ನಿನಗೆ ಕೇಡು ಮಾಡುವುದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ, ‘ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಹೇಳದಂತೆ ಎಚ್ಚರವಾಗಿರು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಿಮಗೆ ಹಾನಿಮಾಡುವ ಸಾಮರ್ಥ್ಯ ನನಗಿದೆ. ಆದರೆ ಕಳೆದ ರಾತ್ರಿ ನಿಮ್ಮ ತಂದೆಯ ದೇವರು, “ಯಕೋಬನಿಗೆ ಯಾವ ಬೆದರಿಕೆಯನ್ನೂ ಹಾಕಬೇಡ, ಎಚ್ಚರಿಕೆ!” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಿಮಗೆ ಕೇಡುಮಾಡುವದಕ್ಕೆ ನನ್ನಲ್ಲಿ ಸಾಮರ್ಥ್ಯವುಂಟು; ಆದರೆ ಹೋದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು - ಯಾಕೋಬನಿಗೆ ಏನೂ ಅನ್ನಬೇಡ ನೋಡಿಕೋ ಎಂದು ನನಗೆ ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಿನಗೆ ಕೇಡುಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದ ರಾತ್ರಿ ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡುಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:29
19 ತಿಳಿವುಗಳ ಹೋಲಿಕೆ  

ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.


ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.


ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.


ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


“ಸ್ವಾಮಿ, ತಾವು ಯಾರು?” ಎಂದು ಸೌಲನು ಪ್ರಶ್ನಿಸಲು, “ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.


“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.


ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.


ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.


ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.


ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.


“ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ಅದಕ್ಕೆ ಲಾಬಾನನು ಮತ್ತು ಬೆತೂಯೇಲನು, “ಈ ಕಾರ್ಯವು ಯೆಹೋವ ದೇವರಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು


ಅವರಿಗೆ, “ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದ ಹಾಗೆ ಈಗ ಇಲ್ಲದಿರುವುದನ್ನು ನಾನು ನೋಡಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಕಡೆಗೆ ಇದ್ದಾರೆ.


ಆದರೆ ನಿಮ್ಮ ತಂದೆಯು ನನಗೆ ವಂಚನೆಮಾಡಿ, ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡು ಮಾಡಗೊಡಿಸಲಿಲ್ಲ.


ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.


ಆದರೆ ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೆಯದಾದರೂ, ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಏಕೆಂದರೆ ಅವನು ತನ್ನ ಸಹೋದರಿಯಾದ ತಾಮಾರಳನ್ನು ಅವಮಾನ ಮಾಡಿದ್ದರಿಂದ, ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು