ಆದಿಕಾಂಡ 31:34 - ಕನ್ನಡ ಸಮಕಾಲಿಕ ಅನುವಾದ34 ಆದರೆ ರಾಹೇಲಳು ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು, ಅದರ ಮೇಲೆ ಕುಳಿತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದರೂ, ಅವನು ಅವುಗಳನ್ನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ರಾಖೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು, ಅವುಗಳ ಮೇಲೆ ಕುಳಿತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನುಗಳನ್ನೆಲ್ಲ ಮುಟ್ಟಿ ಮುಟ್ಟಿ ನೋಡಿದನು. ವಿಗ್ರಹಗಳು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು ಅವುಗಳ ಮೇಲೆ ಕೂತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನನ್ನೆಲ್ಲಾ ಮುಟ್ಟಿಮುಟ್ಟಿ ನೋಡಿದರೂ ಅವುಗಳನ್ನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ರಾಹೇಲಳು ಆ ವಿಗ್ರಹಗಳನ್ನು ತನ್ನ ಒಂಟೆಯ ಸಬರದೊಳಗಿಟ್ಟು ಅದರ ಮೇಲೆ ಕುಳಿತುಕೊಂಡಿದ್ದಳು. ಲಾಬಾನನು ಇಡೀ ಗುಡಾರವನ್ನು ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |