Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:37 - ಕನ್ನಡ ಸಮಕಾಲಿಕ ಅನುವಾದ

37 ನೀನು ನನ್ನ ಸಲಕರಣೆಗಳನ್ನೆಲ್ಲಾ ಹುಡುಕಿದ ಮೇಲೆ ನಿನ್ನ ಮನೆಯ ಯಾವ ವಸ್ತುಗಳನ್ನು ಕಂಡುಕೊಂಡೆ? ನನಗೂ, ನಿನಗೂ ಬಂಧುಗಳಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಾನು ಮಾಡಿದ ದ್ರೋಹವಾದರೂ ಏನು? ನೀವು ನನ್ನ ಸಾಮಾನುಗಳನ್ನೆಲ್ಲಾ ಪರೀಕ್ಷಿಸಿ ನೋಡಿದ್ದಾಯಿತು; ನಿಮ್ಮ ಸೊತ್ತೇನಾದರೂ ಸಿಕ್ಕಿದೆಯೇ? ಸಿಕ್ಕಿದ್ದರೆ ನನ್ನವರ ಮುಂದೆಯೂ ನಿಮ್ಮವರ ಮುಂದೆಯೂ ತಂದಿಡಿ, ನೋಡೋಣ. ಅವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನನ್ನ ಸಾಮಾನನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನವರ ಮುಂದೆಯೂ ನಿನ್ನವರ ಮುಂದೆಯೂ ಅದನ್ನು ತಂದಿಡು ನೋಡೋಣ; ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನಾನು ಹೊಂದಿರುವ ಪ್ರತಿಯೊಂದನ್ನು ನೀನು ಪರೀಕ್ಷಿಸಿ ನೋಡಿದರೂ ನಿನಗೆ ಸೇರಿರುವ ಯಾವುದೂ ನಿನಗೆ ಸಿಕ್ಕಲಿಲ್ಲ. ನಿನಗೆ ಅಂಥದ್ದೇನಾದರೂ ಸಿಕ್ಕಿದರೆ ತೋರಿಸು. ನನ್ನ ಜನರಿಗೆಲ್ಲ ಕಾಣಿಸುವಂತೆ ಅದನ್ನು ಇಲ್ಲಿಡು. ನಮ್ಮಲ್ಲಿ ಯಾರು ಸರಿಯಾದವರೆಂದು ನಮ್ಮ ಜನರೇ ನಿರ್ಣಯಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:37
11 ತಿಳಿವುಗಳ ಹೋಲಿಕೆ  

ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ.


ನಂಬುವವರಾದ ನಿಮ್ಮೊಂದಿಗೆ ನಾವು ಎಷ್ಟೋ ಪವಿತ್ರರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿ.


ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’


ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲರ ಬಳಿಗೂ ತಂದು, ಯೆಹೋವ ದೇವರ ಮುಂದೆ ಇಟ್ಟರು.


ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳು ಸಿಕ್ಕುವುವೋ ಅವರು ಸಾಯಲಿ. ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ, ನಮ್ಮ ಬಂಧುಗಳ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ,” ಎಂದನು. ಆದರೆ ರಾಹೇಲಳು ಅವುಗಳನ್ನು ಕದ್ದುಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.


ಆಗ ಯಾಕೋಬನು ಕೋಪಗೊಂಡು ಲಾಬಾನನೊಂದಿಗೆ ವಾದಿಸಿದನು. ಯಾಕೋಬನು ಉತ್ತರವಾಗಿ ಲಾಬಾನನಿಗೆ, “ನೀನು ನನ್ನನ್ನು ಬೆನ್ನಟ್ಟಿ ಬರುವುದಕ್ಕೆ ನನ್ನ ಅಪರಾಧವೇನು?” ನನ್ನ ಪಾಪವೇನು?


“ಈ ಇಪ್ಪತ್ತು ವರ್ಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ, ಮೇಕೆಗಳೂ ಮರಿ ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು