Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:38 - ಕನ್ನಡ ಸಮಕಾಲಿಕ ಅನುವಾದ

38 “ಈ ಇಪ್ಪತ್ತು ವರ್ಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ, ಮೇಕೆಗಳೂ ಮರಿ ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 “ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಇದಕ್ಕಾಗಿಯೇ ನಾನು ಇಪ್ಪತ್ತು ವರ್ಷ ನಿಮ್ಮ ಬಳಿ ಇದ್ದುದು? ನಿಮ್ಮ ಆಡುಕುರಿಗಳು ಕಂದು ಹಾಕಲಿಲ್ಲ; ನಿಮ್ಮ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನಾನು ಇಪ್ಪತ್ತು ವರುಷ ನಿನ್ನ ಬಳಿಯಲ್ಲಿದ್ದೆನಲ್ಲಾ. ನಿನ್ನ ಆಡುಕುರಿಗಳು ಕಂದು ಹಾಕಲಿಲ್ಲ; ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಾನು ನಿನಗೋಸ್ಕರ ಇಪ್ಪತ್ತು ವರ್ಷ ದುಡಿದೆ. ಆ ಸಮಯದಲ್ಲೆಲ್ಲ ಯಾವ ಕುರಿಮರಿಯಾಗಲಿ ಆಡಾಗಲಿ ಹುಟ್ಟುವಾಗ ಸಾಯಲಿಲ್ಲ; ನಿನ್ನ ಮಂದೆಗಳಲ್ಲಿನ ಯಾವ ಟಗರನ್ನಾಗಲಿ ನಾನು ತಿಂದುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:38
9 ತಿಳಿವುಗಳ ಹೋಲಿಕೆ  

ನಿಮ್ಮ ಸಂತಾನಕ್ಕೂ ನಿಮ್ಮ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.


ಗರ್ಭ ಸ್ರಾವವಾಗಲಿ, ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವುದಿಲ್ಲ. ನಾನು ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ಅನುಗ್ರಹಿಸುವೆನು.


ನಾನು ಬರುವುದಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಯೆಹೋವ ದೇವರು ನಿನ್ನನ್ನು ಆಶೀರ್ವದಿಸಿದ್ದಾರೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ?” ಎಂದನು.


ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.


“ಇದಲ್ಲದೆ ಕುರಿಗಳು ಸಂಗಮ ಮಾಡುವಾಗ, ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ, ಕುರಿಗಳ ಮೇಲೆ ಏರುವ ಟಗರುಗಳು ಚುಕ್ಕೆ, ಮಚ್ಚೆ, ರೇಖೆಗಳುಳ್ಳವುಗಳಾಗಿದ್ದವು.


ನೀನು ನನ್ನ ಸಲಕರಣೆಗಳನ್ನೆಲ್ಲಾ ಹುಡುಕಿದ ಮೇಲೆ ನಿನ್ನ ಮನೆಯ ಯಾವ ವಸ್ತುಗಳನ್ನು ಕಂಡುಕೊಂಡೆ? ನನಗೂ, ನಿನಗೂ ಬಂಧುಗಳಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.


ಮೃಗಗಳಿಂದ ಘಾಯವಾದವುಗಳನ್ನು ನಿನ್ನ ಬಳಿಗೆ ತಾರದೆ, ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ, ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡೆ.


ಅದಕ್ಕೆ ಯಾಕೋಬನು ಅವನಿಗೆ, “ನಾನು ನಿನಗೆ ಮಾಡಿದ ಸೇವೆಯನ್ನೂ, ನಿನ್ನ ಪಶುಗಳು ನನ್ನ ಬಳಿಯಲ್ಲಿ ಹೇಗೆ ಅಭಿವೃದ್ಧಿ ಆಗಿವೆ ಎಂಬುದನ್ನೂ ನೀನು ಬಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು