ಆದಿಕಾಂಡ 31:39 - ಕನ್ನಡ ಸಮಕಾಲಿಕ ಅನುವಾದ39 ಮೃಗಗಳಿಂದ ಘಾಯವಾದವುಗಳನ್ನು ನಿನ್ನ ಬಳಿಗೆ ತಾರದೆ, ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ, ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಕಾಡುಮೃಗಗಳು ಕೊಂದ ಆಡುಕುರಿಗಳ ಅಳಿದುಳಿಕೆಗಳನ್ನು ನಿಮಗೆ ತಂದುತೋರಿಸದೆ, ನಾನೇ ಈಡು ತೆತ್ತಿದ್ದೇನೆ. ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಕದ್ದುಹೋದ ಜಾನುವಾರುಗಳಿಗೆ ಪರಿಹಾರವನ್ನು ನನ್ನ ಕೈಯಿಂದಲೆ ಕಿತ್ತುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಕಾಡುಮೃಗಗಳು ಕೊಂದ ಪಶುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ಬದಲುಕೊಟ್ಟೆನು; ಹಗಲಾಗಲಿ ಇರುಳಾಗಲಿ ಕದ್ದುಹೋದದ್ದರ ಲೆಕ್ಕವನ್ನು ನನ್ನಿಂದಲೇ ತೆಗೆದುಕೊಂಡಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಕ್ರೂರ ಮೃಗಗಳು ಕುರಿಯನ್ನು ಕೊಂದಾಗಲೆಲ್ಲಾ ಅದಕ್ಕೆ ಬದಲಾಗಿ ನನ್ನ ಕುರಿಯನ್ನು ನಿನಗೆ ಕೊಟ್ಟೆನು. ಸತ್ತುಹೋದ ಪಶುವನ್ನು ನಿನ್ನ ಮುಂದೆ ತಂದು, ‘ಇದು ನನ್ನ ತಪ್ಪಲ್ಲ’ ಎಂದು ನಿನಗೆ ಹೇಳಲಿಲ್ಲ. ಕಳುವು ಹಗಲಲ್ಲಾಗಿದ್ದರೂ ರಾತ್ರಿಯಲ್ಲಾಗಿದ್ದರೂ ಕಳುವಾದ ಪಶುಗಳಿಗೆ ಪ್ರತಿಯಾಗಿ ಪಶುಗಳನ್ನು ನೀನು ನನ್ನಿಂದ ವಸೂಲಿ ಮಾಡಿದೆ. ಅಧ್ಯಾಯವನ್ನು ನೋಡಿ |